Uncategorized

ಡಿ.ಕೆ.ಶಿ ಸಿಎಂ ಪ್ರಮಾಣವಚನಕ್ಕೆ ಆಗಮಿಸಿದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ: ನೂತನ ಮುಖ್ಯಮಂತ್ರಿಗೆ ಶುಭ ಹಾರೈಕೆ!

Share

• ಬೆಂಗಳೂರಿಗೆ ಆಗಮಿಸಿದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ
• ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಶುಭ ಹಾರೈಕೆ
• ತಂದೆ ಸತೀಶ್ ಜಾರಕಿಹೊಳಿ ಶ್ರಮಕ್ಕೆ ಗೌರವ
• ಹೈಕಮಾಂಡ್ ಅಂತಿಮ ನಿರ್ಧಾರಕ್ಕೆ ಬದ್ಧ ಎಂದ ಸಂಸದೆ
ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ಇಡೀ ರಾಜ್ಯದ ಪ್ರಮುಖ ನಾಯಕರು ರಾಜಧಾನಿ ಬೆಂಗಳೂರಿನತ್ತ ಧಾವಿಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಪ್ರಮಾಣವಚನ ಸಮಾರಂಭದಲ್ಲಿ ಭಾಗಿಯಾಗಲು ಆಗಮಿಸಿದ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಹತ್ವದ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ.

ನೂತನ ಮುಖ್ಯಮಂತ್ರಿಯ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ನೂತನ ಮುಖ್ಯಮಂತ್ರಿಯವರಿಗೆ ಶುಭ ಹಾರೈಸಿದರು. ಈ ವೇಳೆ ತಾವು ಅತ್ಯಂತ ಕೃತಜ್ಞ ಹಾಗೂ ಅದೃಷ್ಟಶಾಲಿ ಎಂದು ಭಾವಿಸುವುದಾಗಿ ಹೇಳಿದ ಅವರು, ಈ ಹಿಂದೆ ಸಿದ್ದರಾಮಯ್ಯನವರ ಜೊತೆ ಕೆಲಸ ಮಾಡಿದ ಅನುಭವವನ್ನು ಸ್ಮರಿಸಿದ್ದಲ್ಲದೆ, ಅವರು ಕಳೆದ 3 ವರ್ಷಗಳ ಕಾಲ ಅತ್ಯಂತ ಯಶಸ್ವಿ ಹಾಗೂ ಉತ್ತಮ ಆಡಳಿತ ನೀಡಿದ್ದಾರೆ, ಮುಂದೆಯೂ ಸಹ ರಾಜ್ಯದಲ್ಲಿ ಇಂತಹುದೇ ಉತ್ತಮ ಆಡಳಿತ ಮುಂದುವರಿಯಲಿ ಎಂದು ಆಶಿಸಿದರು.

ಇದೇ ಸಂದರ್ಭದಲ್ಲಿ ಸಚಿವ ಸಂಪುಟದ ಕುರಿತು ಮಾತನಾಡಿದ ಸಂಸದೆ, ತಮ್ಮ ತಂದೆಯವರಾದ ಸತೀಶ್ ಜಾರಕಿಹೊಳಿ ಅವರು ಕಳೆದ 40 ವರ್ಷಗಳಿಂದ ನಿರಂತರವಾಗಿ ಪಕ್ಷ ಸಂಘಟನೆ ಮಾಡಿಕೊಂಡು ಬಂದಿದ್ದಾರೆ, ಹೀಗಾಗಿ ಎರಡು ಸ್ಥಾನಗಳನ್ನು ಕೇಳಿದ್ದು ಅದು ಸಿಕ್ಕರೆ ಪಕ್ಷ ಸಂಘಟನೆಗೆ ಮತ್ತಷ್ಟು ದೊಡ್ಡ ಶಕ್ತಿ ಸಿಗಲಿದೆ ಎಂದರಲ್ಲದೆ, ಸದ್ಯದ ಪರಿಸ್ಥಿತಿಯಲ್ಲಿ ಹೈಕಮಾಂಡ್ ಅಂತಿಮವಾಗಿ ಯಾವುದೇ ತೀರ್ಮಾನ ಕೈಗೊಂಡರೂ ಅದಕ್ಕೆ ತಮ್ಮ ತಂದೆಯವರು ಬದ್ಧರಾಗಿ ನಡೆದುಕೊಳ್ಳಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

Tags:

error: Content is protected !!