• ಗೌರವಾನ್ವಿತ ರಾಜ್ಯಪಾಲರಿಗೆ ತಲುಪಿದ ಅಧಿಕೃತ ಪಟ್ಟಿ
• ನೂತನ ಸಚಿವ ಸಂಪುಟದ ನಾಯಕರ ವಿವರ
• ರಾಜ್ಯ ಸಚಿವ ಸಂಪುಟ ಸೇರಿದ ಪ್ರಮುಖರು
• ಇಂದು ಸಂಜೆ ನಾಯಕರ ಭವ್ಯ ಪದಗ್ರಹಣ

ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಚಿವ ಸಂಪುಟದ ಅಧಿಕೃತ ಲಿಸ್ಟ್ ಪ್ರಕಟಗೊಂಡಿದೆ. ಗೌರವಾನ್ವಿತ ರಾಜ್ಯಪಾಲರಿಗೆ ಪ್ರಮಾಣ ವಚನ ಬೋಧಿಸಲು ಸಲ್ಲಿಕೆಯಾಗಿರುವ ಅಧಿಕೃತ ಪಟ್ಟಿ ಲಭ್ಯವಾಗಿದ್ದು, ಯಾರಿಗೆಲ್ಲಾ ಮಂತ್ರಿ ಸ್ಥಾನ ಒಲಿದಿದೆ ಎಂಬ ಸಂಪೂರ್ಣ ವಿವರ ಇಲ್ಲಿದೆ ನೋಡಿ.
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರ ವಹಿಸಿಕೊಳ್ಳುತ್ತಿರುವ ಬೆನ್ನಲ್ಲೇ, ಅವರ ಸಚಿವ ಸಂಪುಟ ಸೇರಲಿರುವ ಪ್ರಮುಖ ನಾಯಕರ ಅಧಿಕೃತ ಪಟ್ಟಿಯನ್ನು ಗೌರವಾನ್ವಿತ ರಾಜ್ಯಪಾಲರಿಗೆ ಸಲ್ಲಿಸಲಾಗಿದೆ. ಈ ಪಟ್ಟಿಯಲ್ಲಿ ಮುಖ್ಯಮಂತ್ರಿಗಳೊಂದಿಗೆ ಹಿರಿಯ ಹಾಗೂ ಪ್ರಮುಖ ನಾಯಕರುಗಳಿಗೆ ಪ್ರಮಾಣ ವಚನ ಬೋಧಿಸಬೇಕಾಗಿ ಅತ್ಯಂತ ವಿನಮ್ರತೆಯಿಂದ ವಿನಂತಿಸಿಕೊಳ್ಳಲಾಗಿದೆ. ಕಾಂಗ್ರೆಸ್‌ನ ನಿಷ್ಠಾವಂತ ಹಾಗೂ ಅನುಭವಿ ನಾಯಕರುಗಳಿಗೆ ಮೊದಲ ಹಂತದಲ್ಲಿ ಮಂತ್ರಿಗಿರಿ ನೀಡಲಾಗಿದ್ದು, ಹೈಕಮಾಂಡ್ ಎಲ್ಲಾ ವಲಯ ಹಾಗೂ ಸಮುದಾಯಗಳ ಸಮತೋಲನ ಕಾಯ್ದುಕೊಳ್ಳಲು ಈ ಪಟ್ಟಿಯ ಮೂಲಕ ಪ್ರಯತ್ನಿಸಿದೆ.

ರಾಜ್ಯಪಾಲರಿಗೆ ಸಲ್ಲಿಕೆಯಾಗಿರುವ ಅಧಿಕೃತ ಪಟ್ಟಿಯ ಪ್ರಕಾರ, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ. ಕೆ. ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅವರೊಂದಿಗೆ ಸಚಿವರುಗಳಾಗಿ ಡಾ. ಜಿ. ಪರಮೇಶ್ವರ್, ಕೆ. ಎಚ್. ಮುನಿಯಪ್ಪ, ಕೆ. ಜೆ. ಜಾರ್ಜ್, ಎಂ. ಬಿ. ಪಾಟೀಲ್, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಕೃಷ್ಣ ಬೈರೇಗೌಡ, ಶ್ರೀ ಪ್ರಿಯಾಂಕ್ ಖರ್ಗೆ, ಯು. ಟಿ. ಖಾದರ್, ಈಶ್ವರ್ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ, ಬೈರತಿ ಸುರೇಶ್ ಹಾಗೂ ಶರಣಪ್ರಕಾಶ್ ಪಾಟೀಲ್ ಅವರುಗಳು ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಈ ಎಲ್ಲ ಪ್ರಮುಖ ನಾಯಕರುಗಳು ಇಂದು ಸಂಜೆ ಅಧಿಕೃತವಾಗಿ ರಾಜ್ಯದ ನೂತನ ಸಚಿವರುಗಳಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
