ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಪಕ್ಷದ ಸಚಿವ ಸ್ಥಾನ ವಂಚಿತರಿಗೆ ಹಾಗೂ ಅಧಿಕಾರ ಲಾಲಸೆ ಉಳ್ಳವರಿಗೆ ಅತ್ಯಂತ ಖಡಕ್ ಸಂದೇಶ ರವಾನಿಸಿದ್ದಾರೆ. ಯಾರಿಗೆ ಸ್ಥಾನಮಾನ ಬೇಕೋ ಅವರು ಸಿಎಂ ಡಿ.ಕೆ. ಶಿವಕುಮಾರ್ ಜೊತೆ ಹೋಗಲಿ ಎಂದಿದ್ದಾರೆ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಪಕ್ಷದ ಸಚಿವ ಸ್ಥಾನ ವಂಚಿತರಿಗೆ ಹಾಗೂ ಅಧಿಕಾರ ಆಸೆ ಉಳ್ಳವರಿಗೆ ಅತ್ಯಂತ ಖಡಕ್ ಸಂದೇಶ ರವಾನಿಸಿದ್ದಾರೆ. “ಯಾರಿಗೆ ಅಧಿಕಾರ ಮತ್ತು ಸ್ಥಾನಮಾನ ಬೇಕೋ ಅವರು ಡಿ.ಕೆ. ಶಿವಕುಮಾರ್ ಜೊತೆಗೆ ಹೋಗಿ, ಪಕ್ಷವನ್ನು ಸದೃಢವಾಗಿ ಬೆಳೆಸಬೇಕು ಅನ್ನೋರು ನಮ್ಮ ಜೊತೆಗೆ ಬನ್ನಿ” ಎಂದು ಹೇಳುವ ಮೂಲಕ ಕಾಂಗ್ರೆಸ್ ನಾಯಕರಿಗೆ ಹಾಗೂ ಸಚಿವ ಆಕ್ಷಾಂಕಿಗಳಿಗೆ ಖಡಕ್ ಮಾತುಗಳನ್ನು ಹೇಳಿದ್ದಾರೆ. ಬಿ.ಕೆ. ಹರಿಪ್ರಸಾದ್, ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ನಾಯಕರಿಗೆ ಕಳಕಳಿಯ ವಿನಂತಿ ಮಾಡಿದರು. “ಸರ್ಕಾರದಲ್ಲಿ ಈಗಾಗಲೇ ಬೇರೆ ಬೇರೆ ಕೆಲಸ ಮಾಡಿದವರು ಈಗ ಪಕ್ಷದ ಸಂಘಟನೆಗೆ ಒತ್ತು ನೀಡಬೇಕು. ನಾವೆಲ್ಲರೂ ಸೇರಿ ರಾಹುಲ್ ಗಾಂಧಿ ಅವರ ಹೋರಾಟಕ್ಕೆ ಶಕ್ತಿ ತುಂಬುವ ಕೆಲಸ ಮಾಡಬೇಕಿದೆ. ಸಂಘಟನೆ ಮತ್ತು ಸರ್ಕಾರ ಎರಡನ್ನೂ ಸಮತೋಲನವಾಗಿ ಹಂಚಿಕೊಂಡು ಮುಂದೆ ಹೋಗೋಣ. ನನ್ನ ಪೂರ್ವಜರು ಮಾಡಿದ ಪುಣ್ಯದಿಂದಾಗಿ ಈ ಪವಿತ್ರ ಪಕ್ಷದ ಅಧ್ಯಕ್ಷ ಹುದ್ದೆ ನನಗೆ ಸಿಕ್ಕಿದೆ. ಸಾಮಾನ್ಯ ಕಾರ್ಯಕರ್ತರಿಗೆ ಏನೇ ತೊಂದರೆಯಾದರೂ ನಾನು ಸದಾ ಅವರ ಜೊತೆ ಇರುತ್ತೇನೆ” ಎಂದು ಭರವಸೆ ನೀಡಿದರು.

