ವಿಜಯಪುರ ನಗರದ ಆದರ್ಶ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡುವವರು ಹಾಗೂ ಮದ್ಯ ಸೇವಿಸಿ ವಾಹನ ಚಾಲನೆ ಮಾಡುವವರ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದರು. ಆದರ್ಶ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳು ಹಾಗೂ ಖಾಲಿ ಪ್ಲಾಟ್ಗಳಲ್ಲಿ ಮದ್ಯಪಾನ ಮಾಡುತ್ತಿದ್ದವರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಯಿತು. ಇದೇ ವೇಳೆ ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ನಡೆಸಿ, ಮದ್ಯ ಸೇವಿಸಿ ವಾಹನ ಚಾಲನೆ ಮಾಡುತ್ತಿದ್ದವರ ವಿರುದ್ಧವೂ ಪ್ರಕರಣ ದಾಖಲಿಸಲಾಯಿತು.


ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಹಾಗೂ ಮದ್ಯ ಸೇವಿಸಿ ವಾಹನ ಚಾಲನೆ ಮಾಡುವವರ ವಿರುದ್ಧ ಮುಂದೆಯೂ ನಿರಂತರ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

