Bagalkot

ಘಟಪ್ರಭಾ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಯುವಕನ ಶವ ಪತ್ತೆ!

Share

ಬಾಗಲಕೋಟೆ ಜಿಲ್ಲೆಯ ಕಲಾದಗಿ ಗ್ರಾಮದ ಬಳಿ ಹರಿಯುವ ಘಟಪ್ರಭಾ ನದಿಯಲ್ಲಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಕಲಾದಗಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಬಾಗಲಕೋಟೆ ತಾಲೂಕಿನ ಕಲಾದಗಿ ಗ್ರಾಮದ ಸಮೀಪದ ಘಟಪ್ರಭಾ ನದಿಯಲ್ಲಿ ಅಪರಿಚಿತ ಯುವಕನೊಬ್ಬನ ಶವ ಸಂಪೂರ್ಣವಾಗಿ ಕೊಳೆತ ಸ್ಥಿತಿಯಲ್ಲಿ ತೇಲುತ್ತಿರುವುದು ಪತ್ತೆಯಾಗಿದೆ. ಮೃತನಿಗೆ ಸುಮಾರು 30 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದ್ದು, ಸದ್ಯಕ್ಕೆ ಆತನ ಗುರುತು ಸಿಕ್ಕಿಲ್ಲ. ಸ್ಥಳಕ್ಕೆ ಭೇಟಿ ನೀಡಿದ ಕಲಾದಗಿ ಠಾಣೆಯ ಪೊಲೀಸರು ಪ್ರಾಥಮಿಕ ತನಿಖೆ ನಡೆಸಿ, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಕುರಿತು ಕಲಾದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತನ ಪತ್ತೆಗಾಗಿ ಮತ್ತು ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ನಿಟ್ಟಿನಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

Tags:

error: Content is protected !!