ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕುಂದಾನಗರಿ ಬೆಳಗಾವಿಯಲ್ಲಿ ಮಾಜಿ ಸೈನಿಕರು ದೇಶ ಕಾಯುವ ಕಾಯಕದ ಜೊತೆಗೆ ಪ್ರಕೃತಿಯನ್ನು ಕಾಯುವ ವಿಭಿನ್ನ ಹಾಗೂ ಮಾದರಿ ಕಾರ್ಯಕ್ರಮವೊಂದನ್ನು ಹಮ್ಮಿಕೊಂಡಿದ್ದರು. ಜಿಲ್ಲಾ ಮಾಜಿ ಸೈನಿಕರ ಸಂಘಟನೆಗಳ ಮಹಾಒಕ್ಕೂಟ ಹಾಗೂ ಅದರ ಮಹಿಳಾ ಘಟಕದ ಸಂಯುಕ್ತಾಶ್ರಯದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಸಸಿಗಳನ್ನು ವಿತರಿಸಿ, ಪರಿಸರ ಜಾಗೃತಿ ಮೂಡಿಸುವ ಮೂಲಕ ಹಸಿರು ಸಂಕಲ್ಪ ತೊಡಲಾಯಿತು.


ಬೆಳಗಾವಿ ಜಿಲ್ಲಾ ಮಾಜಿ ಸೈನಿಕರ ಸಂಘಟನೆಗಳ ಮಹಾಒಕ್ಕೂಟ ಮತ್ತು ಬೆಳಗಾವಿ ಜಿಲ್ಲಾ ಮಾಜಿ ಸೈನಿಕರ ಸಂಘಟನೆಗಳ ಮಹಾಒಕ್ಕೂಟ ಮಹಿಳಾ ಘಟಕದ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಉಚಿತವಾಗಿ ಸಸಿಗಳನ್ನು ವಿತರಿಸಿ ಪರಿಸರ ಜಾಗೃತಿಯನ್ನು ಮೂಡಿಸಲಾಯಿತು.

ಬೆಳಗಾವಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿ ನಡೆದ ಈ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಬೆಳಗಾವಿ ಜಿಲ್ಲಾ ಮಾಜಿ ಸೈನಿಕರ ಸಂಘಟನೆಗಳ ಮಹಾಒಕ್ಕೂಟದ ಜಿಲ್ಲಾಧ್ಯಕ್ಷ ಜಗದೀಶ್ ಪೂಜೇರಿ ಅವರು, ಬೆಳಗಾವಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ವಿಶ್ವ ಪರಿಸರ ದಿನಾಚರಣೆ ಹಿನ್ನೆಲೆ ಬಿಮ್ಸ್ ಆವರಣದಲ್ಲಿ ಸುಮಾರು 50 ಸಸಿಗಳನ್ನು ನೆಡುವ ಸಂಕಲ್ಪವನ್ನು ಕೈಗೊಳ್ಳಲಾಗಿದೆ. ಜಾಗತೀಕ ಪ್ರಕೃತಿ ವಿಕೋಪವನ್ನು ದೂರವಾಗಿಸಲು ವೃಕ್ಷಾರೋಪಣವು ಪೂರಕವಾಗಿದ್ದು, ಪ್ರತಿ ವರ್ಷ ಜಾಗೃತಿಯನ್ನು ಮೂಡಿಸುವ ಕಾರ್ಯವನ್ನು ಮಾಜಿ ಸೈನಿಕ ಸಂಘಟನೆಯೂ ಮಾಡುತ್ತಿದೆ ಎಂದರು.
ಈ ಸಂದರ್ಭದಲ್ಲಿ ರಮೇಶ್ ಚೌಗಲಾ, ಡಾ. ಸತೀಶ್ ಚೌಲಿಗೇರ, ಪ್ರಶಾಂತ ಗೌರಾಣಿ, ಡಾ. ಅಶೋಕಕುಮಾರ್ ಶೆಟ್ಟಿ, ಮನೋಹರ ಪುಡಕಲಕಟ್ಟಿ, ನಾಗೇಶ್ ಯಡಾಲ್, ಸುರೇಶ್ ಲಕ್ಕಣ್ಣವರ ಸೇರಿದಂತೆ ಇನ್ನುಳಿದವರು ಭಾಗಿಯಾಗಿದ್ಧರು.
