Uncategorized

ಜಮೀ‌ರ್ ಅಹ್ಮದ್ ಗೆ ಸಚಿವ ಸ್ಥಾನ ನೀಡುವಂತೆ ಪ್ರತಿಭಟನೆ: ಅಂಜುಮನ್, ಕಾಂಗ್ರೆಸ್ಸಿನಿಂದ ಆಗ್ರಹ..!

Share

ಮಾಜಿ ಸಚಿವ ಜಮೀರ್ ಅಹ್ಮದ್ ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಅಂಜುಮನ್‌ ಸಂಸ್ಥೆ ಹಾಗೂ ಕಾಂಗ್ರೆಸ್ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಹುಬ್ಬಳ್ಳಿಯ ಇಂಡಿಪಂಪ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದು, ಅಂಜುಮನ್‌ ಸಂಸ್ಥೆ ಅಧ್ಯಕ್ಷ ಎ.ಎಂ.ಹಿಂಡಿಸಗೇರಿ, ಹುಬ್ಬಳ್ಳಿ ಧಾರವಾಡ ನಗರ ಕಾಂಗ್ರೆಸ್‌ ಅಧ್ಯಕ್ಷ ಅಲ್ತಾಪ್ ಹಳ್ಳೂರು ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಮಾಜಿ ಸಚಿವ ಜಮೀ‌ರ್ ಅಹ್ಮದ್ ಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದರು.

ಜಮೀರ್ ಭಾವಚಿತ್ರ ಹಿಡಿದು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಮುಸಲ್ಮಾನ ಸಮಾಜಕ್ಕೆ ಅನ್ಯಾಯ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜಮೀರ್ ಅಹ್ಮದ್ ಗೆ ಸಚಿವ ಸ್ಥಾನ ನೀಡಬೇಕು. ಈ ಹಿಂದೆ ಜಮೀ‌ರ್ ಅಹ್ಮದ್ ಉತ್ತಮ ಕೆಲಸ ಮಾಡಿದ್ದಾರೆ. ಹೀಗಾಗಿ ಮತ್ತೊಮ್ಮೆ ಅವರನ್ನು ಮಂತ್ರಿ ಮಾಡಬೇಕು ಅಂತ ಆಗ್ರಹಿಸಿದರು.

Tags:

error: Content is protected !!