Bailahongala

ಈಜಲು ಹೋಗಿ ಮಲಪ್ರಭಾ ನದಿ ಪಾಲಾದ 15 ವರ್ಷದ ಬಾಲಕ; ವಕ್ಕುಂದ ಗ್ರಾಮದಲ್ಲಿ ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

Share

ಮಲಪ್ರಭಾ ನದಿಯಲ್ಲಿ ಮುಳುಗಿ ಬಾಲಕ ಸಾವು
ಬೈಲಹೊಂಗಲದ ವಕ್ಕುಂದ ಗ್ರಾಮದಲ್ಲಿ ದುರ್ಘಟನೆ
ಈಜಲು ಹೋಗಿದ್ದಾಗ ಸಂಭವಿಸಿದ ದುರಂತ
ಅಗ್ನಿಶಾಮಕ ಸಿಬ್ಬಂದಿಯಿಂದ ಶವ ಹೊರಕ್ಕೆ

ಬೈಲಹೊಂಗಲ ತಾಲೂಕಿನ ವಕ್ಕುಂದ ಗ್ರಾಮದ ಬಳಿ ಮಲಪ್ರಭಾ ನದಿಯಲ್ಲಿ ಮುಳುಗಿ ಬಾಲಕನೊಬ್ಬ ಮೃತಪಟ್ಟಿರುವ ದುರ್ಘಟನೆ ಶನಿವಾರ ಬೆಳಕಿಗೆ ಬಂದಿದೆ.

ಮೃತ ಬಾಲಕನನ್ನು ವಕ್ಕುಂದ ಗ್ರಾಮದ ಮಹೇಶ ಮಡಿವಾಳಪ್ಪ ಗಣಾಚಾರಿ (15) ಎಂದು ಗುರುತಿಸಲಾಗಿದೆ.ಶುಕ್ರವಾರ ಮಧ್ಯಾಹ್ನ ನದಿಗೆ ಈಜಲು ತೆರಳಿದ್ದ ವೇಳೆ, ಆಳವಾದ ನೀರಿನ ಪ್ರದೇಶದಲ್ಲಿ ಈಜು ಬಾರದೆ ಮುಳುಗಿದ್ದಾನೆ ಎನ್ನಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸಮಾಜಸೇವಕ ಮಲ್ಲಿಕಾರ್ಜುನ ಗಾಣಿಗೇರ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯ ಆರಂಭಿಸಿದ್ದರು. ಆದರೆ ಕತ್ತಲಾಗಿದ್ದರಿಂದ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು.
ಶನಿವಾರ ಬೆಳಿಗ್ಗೆ ಪುನಃ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬಾಲಕನ ಶವವನ್ನು ನೀರಿನಿಂದ ಹೊರತೆಗೆದರು.ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.ಸಿಪಿಐ ಪ್ರಮೋದ ಯಲಿಗಾರ ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:

error: Content is protected !!