BELAGAVI

ಸ್ವಚ್ಛತೆಯ ಜಾಗೃತಿಗಾಗಿ “ಸೈಕಲ್ ಜಾಥಾ”

Share

ಆರೋಗ್ಯಕರ ಜೀವನಶೈಲಿಯನ್ನು ಉತ್ತೇಜಿಸಲು ಹಾಗೂ ಸಾರ್ವಜನಿಕರಲ್ಲಿ ಸ್ವಚ್ಛತೆಯ ಅರಿವು ಮೂಡಿಸುವ ಉದ್ದೇಶದಿಂದ ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿದೆ. ಸ್ವಚ್ಛತೆಯೆಂಬುದು ಪ್ರತಿದಿನದ ಆಚರಣೆಯಾಗಬೇಕು ಎಂದು ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ (ಆಡಳಿತ) ಬಸವರಾಜ ಹೆಗ್ಗನಾಯಕ್ ಹೇಳಿದರು.

ಬೆಳಗಾವಿಯ ರಾಣಿ ಚನ್ನಮ್ಮ ವೃತ್ತದಲ್ಲಿ ಬೈಸಿಕಲ್ ದಿನಾಚರಣೆ ಹಾಗೂ ಫಿಟ್ ಇಂಡಿಯಾ ಆಂದೋಲನದ ಅಂಗವಾಗಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ ಸಹಯೋಗದಲ್ಲಿ ಭಾನುವಾರ ಏರ್ಪಡಿಸಿದ್ದ “ಸೈಕಲ್ ಜಾಥಾ” (ಸಂಡೇಸ್ ಆನ್ ಸೈಕಲ್-ಸ್ವಚ್ಛತಾ ರೈಡ್) ಗೆ ಚಾಲನೆ ನೀಡಿ ಅವರು ಮಾತನಾಡಿದರು.

ಇಂದಿನ ಸೈಕಲ್ ಜಾಥಾ ಮೂಲಕ ದೈನಂದಿನ ಜೀವನದಲ್ಲಿ ಸೈಕಲ್ ಬಳಕೆಯನ್ನು ಪ್ರೋತ್ಸಾಹಿಸಿ ಪರಿಸರ ಮಾಲಿನ್ಯವನ್ನು ತಗ್ಗಿಸುವ ಕುರಿತು, ದೈಹಿಕವಾಗಿ ಸದೃಢತೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಲು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ರಾಣಿ ಚನ್ನಮ್ಮ ವೃತ್ತದಿಂದ ಆರಂಭವಾದ ಸೈಕಲ್ ಜಾಥಾ ಜಿಲ್ಲಾಸ್ಪತ್ರೆ, ಶ್ರೀಕೃಷ್ಣದೇವರಾಯ ವೃತ್ತದ ಮಾರ್ಗವಾಗಿ ಜಿಲ್ಲಾ ಕ್ರೀಡಾಂಗಣ ತಲುಪಿತು. ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವಸತಿ ನಿಲಯದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಅಧಿಕಾರಿಗಳು ಜಾಥಾದಲ್ಲಿ ಭಾಗವಹಿಸಿದ್ದರು.ನಂತರ ಜಿಲ್ಲಾ ಕ್ರೀಡಾಂಗಣದಲ್ಲಿ ಯೋಗ, ವ್ಯಾಯಾಮ ಹಾಗೂ ಸ್ಕಿಪ್ಪಿಂಗ್ ಚಟುವಟಿಕೆಗಳನ್ನು ಕೈಗೊಳ್ಳಲಾಯಿತು.

ಜಾಥಾದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಬಿ.ಶ್ರೀನಿವಾಸ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಶ್ರೀಕಾಂತ ಸುಣದೋಳಿ, ಜಿಪಂ ಸಹಾಯಕ ಕಾರ್ಯದರ್ಶಿ ರಾಹುಲ್ ಕಾಂಬಳೆ, ಲೆಕ್ಕಾಧಿಕಾರಿ ಶೇಖರ ಪೂಜೇರಿ, ನಿವೃತ್ತ ಸೈಕ್ಲಿಂಗ್ ಹಿರಿಯ ತರಬೇತುದಾರ ಎಂ.ಪಿ. ಮರನೂರ, ಸೈಕ್ಲಿಂಗ್ ತರಬೇತುದಾರ ಯಲ್ಲಪ್ಪ ಹಿರೇಕುರಬರ, ಬಸವರಾಜ ಜಕ್ಕನ್ನವರ, ಸಮೀರ ಚೌಗಲಾ ಸೇರಿ ಜಿಲ್ಲಾ ಪಂಚಾಯತ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಆಯುಷ್ ಇಲಾಖೆ ಸೇರಿ ವಿವಿಧ ಇಲಾಖೆಯ ಸಿಬ್ಬಂದಿ ಸೇರಿದಂತೆ ಇನ್ನುಳಿದವರು ಪಾಲ್ಗೊಂಡಿದ್ದರು.

Tags:

error: Content is protected !!