ವಿಜಯಪುರ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನೂತನ ಸಚಿವರಾದ ಎಂ.ಬಿ. ಪಾಟೀಲ್ ಮತ್ತು ಯತೀಂದ್ರ ಸಿದ್ದರಾಮಯ್ಯ ಅವರ ಅಭಿನಂದನಾ ಕಾರ್ಯಕ್ರಮವನ್ನು ಜಿಲ್ಲಾ ಕಾಂಗ್ರೆಸ್ ಘಟಕ ಆಯೋಜಿಸಿತ್ತು. ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಡಿಕೆ ಶಿವಕುಮಾರ್ ಅವರ ಸಂಪುಟದಲ್ಲಿ ತಮಗೆ ಸಚಿವ ಸ್ಥಾನ ಲಭಿಸಿರುವುದಕ್ಕೆ ಅಭಿಮಾನಿಗಳು ಆಯೋಜಿಸಿದ ಈ ಅಭಿನಂದನಾ ಕಾರ್ಯಕ್ರಮ ಸಂತಸ ತಂದಿದೆ ಎಂದು ಅವರು ತಿಳಿಸಿದರು.

