ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಆಸೀಫ್ ಸೇಠ್ ಅವರಿಗೆ ಕರ್ನಾಟಕ ಸರ್ಕಾರದ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಮುಸ್ಲಿಂ ಸಮಾಜದ ಪ್ರಮುಖರ ನಿಯೋಗವು ಗೋಕಾಕಿನಲ್ಲಿ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.

ಗೋಕಾಕಿನಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸಕ್ಕೆ ಮುಸ್ಲಿಂ ಸಮಾಜದ ನಿಯೋಗ ಭೇಟಿ ನೀಡಿತು. ಕರ್ನಾಟಕ ಸರ್ಕಾರದ ಸಚಿವ ಸಂಪುಟದಲ್ಲಿ ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಆಸೀಫ್ ಸೇಠ್ ಅವರಿಗೆ ಸ್ಥಾನವನ್ನು ನೀಡಬೇಕೆಂದು ಆಗ್ರಹಿಸಿತು.

ಕರ್ನಾಟಕ ಸರ್ಕಾರದ ಸಚಿವ ಸಂಪುಟದಲ್ಲಿ ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಆಸೀಫ್ ಸೇಠ್ ಅವರಿಗೆ ಸ್ಥಾನವನ್ನು ನೀಡಬೇಕು. ಅದರಂತೆ ಹಿಂದಿನ ಸಚಿವ ಸಂಪುಟದಲ್ಲಿ ಝಮೀರ್ ಅಹ್ಮದ್ ಖಾನ್’ಗೆ ನೀಡಿದ ಸಂಪುಟ ಸದಸ್ಯ ಸ್ಥಾನವನ್ನು ಮತ್ತೇ ನೀಡಬೇಕು. ಇದು ಇಡೀ ಮುಸ್ಲಿಂ ಸಮುದಾಯದ ಅಭಿಲಾಷೆಯಾಗಿದೆ. ಬೆಳಗಾವಿಯ ನಿಯೋಗವು ಇಂದು ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿಯನ್ನು ಸಲ್ಲಿಸಿದ್ದು, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ದೊರೆಯುವ ಭರವಸೆಯಿದೆ. ಅದರಂತೆ ಮುಖ್ಯಮಂತ್ರಿಗಳ ಬಳಿಯೂ ನಿಯೋಗವನ್ನು ತೆಗೆದುಕೊಂಡು ಹೋಗಲಾಗುವುದೆಂದು ಲಾಲ್’ಸಾಬ್ ಸಿದ್ಧಾಪುರ ಹೇಳಿದರು.
ಈ ಸಂದರ್ಭದಲ್ಲಿ ಬೆಳಗಾವಿಯ ಮುಸ್ಲಿಂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ಧರು.
