Vijaypura

ಮಳೆಯ ಅವಾಂತರಕ್ಕೆ ತತ್ತರಿಸಿದ ನಗರ ನಿವಾಸಿಗಳು

Share

ವಿಜಯಪುರ ನಗರದಲ್ಲಿ ಭಾನುವಾರ ತಡರಾತ್ರಿ ಸುಮಾರು ಮೂರು ಗಂಟೆಗಳ ಕಾಲ ನಿರಂತರವಾಗಿ ಸುರಿದ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿತು. ನಗರದ ಹಲವು ತಗ್ಗು ಪ್ರದೇಶಗಳಲ್ಲಿ ಮಳೆನೀರು ಮನೆಗಳಿಗೆ ನುಗ್ಗಿ ನಿವಾಸಿಗಳು ಸಂಕಷ್ಟಕ್ಕೆ ಸಿಲುಕಿದರು. ಮನೆಗಳಲ್ಲಿನ ಗೃಹೋಪಯೋಗಿ ವಸ್ತುಗಳು ನೀರಿನಲ್ಲಿ ಮುಳುಗಿದ್ದು, ಜನರು ರಾತ್ರಿ ಪೂರ್ತಿ ನೀರು ಹೊರಹಾಕುವ ಕಾರ್ಯದಲ್ಲಿ ತೊಡಗಿದ್ದರು. ನಗರದ ಪ್ರಮುಖ ರಸ್ತೆಗಳ ಮೇಲೂ ನೀರು ನಿಂತ ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಕೆಲವೆಡೆ ವಾಹನಗಳು ನೀರಿನಲ್ಲಿ ಸಿಲುಕಿ ಚಾಲಕರು ಹಾಗೂ ಪ್ರಯಾಣಿಕರು ಪರದಾಡುವಂತಾಯಿತು. ಮಳೆಯ ತೀವ್ರತೆಗೆ ಒಳಚರಂಡಿಗಳು ತುಂಬಿ ಹರಿದ ಪರಿಣಾಮ ರಸ್ತೆಗಳು ಕೆರೆಗಳಂತಾಗಿದ್ದವು. ಮಳೆ ನೀರು ಸರಾಗವಾಗಿ ಹರಿದು ಹೋಗಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಮಹಾನಗರ ಪಾಲಿಕೆ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.

Tags:

error: Content is protected !!