ಪ್ರಧಾನಿ ನರೇಂದ್ರ ಮೋದಿ ಅವರು ಸತತ 4,399 ದಿನಗಳ ಕಾಲ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದ ಹಿನ್ನೆಲೆ ಬಿಜೆಪಿ ಯುವ ಮೋರ್ಚಾ ವಿಜಯಪುರ ಮಹಾನಗರ ಘಟಕದಿಂದ ವಾರ್ಡ್ ನಂ. 3ರ ಭಾವಸಾರ ನಗರದ ವರದಹಸ್ತ ಆಂಜನೇಯ ದೇವಸ್ಥಾನ ಹಾಗೂ ಸರ್ಕಾರಿ ಶಾಲೆ ನಂ. 32ರಲ್ಲಿ ಸ್ವಚ್ಛತಾ ಮತ್ತು ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳ ಲಾಯಿತು. ಬಿಜೆಪಿ ನಗರ ಮಂಡಲ ಅಧ್ಯಕ್ಷ ಸಂದೀಪ್ ಪಾಟೀಲ ಮಾತನಾಡಿ, ಪ್ರಧಾನಿ ಮೋದಿ ಅವರ ಕನಸಿನ ಕೂಸಾದ ಸ್ವಚ್ಛ ಭಾರತ ಅಭಿಯಾನದಡಿ ಸಾರ್ವಜನಿಕ ಸ್ಥಳಗಳ ಸ್ವಚ್ಛತಾ ಕಾರ್ಯವನ್ನು ಮುಂದುವರಿಸಲಾಗುವುದು ಎಂದರು.


ಯುವ ಮೋರ್ಚಾ ಅಧ್ಯಕ್ಷ ಆನಂದ ಮುಚ್ಚಂಡಿ ಮಾತನಾಡಿ, ತಿಂಗಳಿಗೆ ಕನಿಷ್ಠ ಎರಡು ದೇವಾಲಯ ಅಥವಾ ಶಾಲೆಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸುವುದರ ಜೊತೆಗೆ “ಏಕ್ ಪೇಡ್ ಮಾ ಕೆ ನಾಮ್” ಅಭಿಯಾನದಡಿ ನಗರದ ವಿವಿಧ ವಾರ್ಡ್‌ಗಳಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳ ಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಎಸ್‌ಸಿ ಮೋರ್ಚಾ ಜಿಲ್ಲಾಧ್ಯಕ್ಷ
ಮಂಜುನಾಥ ಮೀಸೆ, ಮಹೇಶ್ ಒಡೆಯರ್, ಜಗದೀಶ ಮುಚ್ಚಂಡಿ, ವಿವೇಕ ತಾವರಗೇರಿ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
