Dharwad

ಕಾರ್ಮಿಕರಿಗೆ ಮೂಲ ಸೌಕರ್ಯ ಒದಗಿಸಲು ಅಧಿಕಾರಿಗಳು ಮುಂದಾಗಿ: ಪಿ. ರಘು

Share

ಕಾರ್ಮಿಕರಿಗೆ ವೇತನ, ಇಎಸ್‍ಐ, ಪಿಎಫ್, ಆರೋಗ್ಯ ವಿಮೆ ಸೇರಿದಂತೆ ಅಗತ್ಯ ಮೂಲ ಸೌಲಭ್ಯಗಳನ್ನು ಒದಗಿಸಲು ಅಧಿಕಾರಿಗಳು ಕ್ರಮಕೈಗೊಳ್ಳಬೇಕೆಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ. ರಘು ಅವರು ಹೇಳಿದರು.

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಗರ ಸ್ಥಳೀಯ ಸಂಸ್ಥೆ, ಗ್ರಾಮ ಪಂಚಾಯತಿಗಳು ಮತ್ತು ಇತರೆ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛತಾ ಕಾರ್ಮಿಕರು, ಪೌರಕಾರ್ಮಿಕರೊಂದಿಗೆ ಸಂವಾದ ಹಾಗೂ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ಜರುಗಿಸಿ, ಮಾತನಾಡಿ, ಹುಬ್ಬಳ್ಳಿ-ಧಾರವಾಡ ನಗರಗಳಲ್ಲಿ 82 ವಾರ್ಡ್‍ಗಳು ಇದ್ದು, ವಾರ್ಡ್‍ಗಳಿಗೆ ಒಂದು ಶೌಚಾಲಯ ನಿರ್ಮಾಣ ಮಾಡಬೇಕು. ಈಗಾಗಲೇ ವಲಯಗಳಿಗನುಸಾರವಾಗಿ ಎರಡು ಶೌಚಾಲಯಗಳಿವೆ. ಅವುಗಳ ಸಂಪರ್ಕ ನಿರ್ವಹಣೆಗೆ ಸಂಬಂಧಪಟ್ಟ ವಲಯ ಆಯುಕ್ತರು ಕ್ರಮಕೈಗೊಳ್ಳಬೇಕು. ಪೌರಕಾರ್ಮಿಕರಿಗೆ ಗುಣಮಟ್ಟದ ಉಪಹಾರ ಪೂರೈಕೆ ಮಾಡಬೇಕು ಎಂದು ತಿಳಿಸಿದರು.

ಪೌರಕಾರ್ಮಿಕರಿಗೆ ಕಾಲಕಾಲಕ್ಕೆ ವೇತನ, ಇಎಸ್‍ಐ, ಪಿಎಫ್, ಆರೋಗ್ಯ ವಿಮೆ ಸೌಲಭ್ಯ ಒದಗಿಸಬೇಕು. ಸೇವಾನಿರತ ಕಾರ್ಮಿಕರು ಮೃತರಾದರೆ, ರೂ. 10 ಲಕ್ಷ ಪರಿಹಾರ ವಿತರಿಸಬೇಕು. ಪೌರಕಾರ್ಮಿಕರಿಗೆ ಸುರಕ್ಷತಾ ಪರಿಕರಗಳು ಹಾಗೂ ಸಮವಸ್ತ್ರಗಳನ್ನು ವಿತರಿಸಬೇಕು. ಪ್ರತಿ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಹಾಗೂ ವರ್ಷಕೊಮ್ಮೆ ಮಾಸ್ಟರ್ ಹೆಲ್ತ್ ಚೆಕ್ ಅಪ್ ಮಾಡಿಸಬೇಕು. ಪೌರಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ನಿವೇಶನಗಳನ್ನು ನೀಡಬೇಕು. ಪೌರಕಾರ್ಮಿಕರಿಗೆ ವಿಶ್ರಾಂತಿ ಕೊಠಡಿ ಕಲ್ಪಿಸಬೇಕು. ಪೌರಕಾರ್ಮಿಕರ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದು ಅವರು ಹೇಳಿದರು.

ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ಸರಿಯಾದ ಸಮಯದಲ್ಲಿ ವೇತನ ನೀಡಲು ಅಗತ್ಯ ಕ್ರಮಗಳನ್ನು ಅಧಿಕಾರಿಗಳು ಕೈಗೊಳ್ಳಬೇಕಾಗಿದೆ. ಈಗಾಗಲೇ ಸಾಕಷ್ಟು ದೂರುಗಳು ಆಯೋಗದ ಗಮನಕ್ಕೆ ಬಂದಿರುತ್ತದೆ. ಕೂಡಲೇ ವೇತನಕ್ಕೆ ಸಂಬಂಧಿಸಿದ ದೂರುಗಳನ್ನು ಪರಿಹರಿಸಲು ಅಧಿಕಾರಿಗಳು ಮುಂದಾಗಬೇಕು. ಕಾರ್ಮಿಕರಿಗೆ ವಸತಿ ಯೋಜನೆಗಳಡಿಯಲ್ಲಿ ಮನೆಗಳನ್ನು ಹಂಚಿಕೆ ಮಾಡಬೇಕು. ಅಲ್ಲದೇ ಹೊರಗುತ್ತಿಗೆ ನೌಕರರ ವೇತನವನ್ನು ತಡೆಹಿಡಿಯಬಾರದು. ಆಯುಷ್ಮಾನ ಭಾರತ ಕಾರ್ಡ ಒದಗಿಸಬೇಕು. ಕಾರ್ಮಿಕರಿಗೆ ಸ್ಯಾಲರಿ ಪ್ಯಾಕೇಜ್ ಸೌಲಭ್ಯ ಒದಗಿಸಬೇಕು. ಮ್ಯಾನ್ಯುವಲ್ ಸ್ವಚ್ಛತೆಯನ್ನು ಕಾರ್ಮಿಕರಿಂದ ಮಾಡಿಸಬಾರದು. ಒಂದು ವೇಳೆ ಮ್ಯಾನ್ಯುವಲ್ ಸ್ವಚ್ಛತೆ ಮಾಡಿಸಿದ ಕುರಿತು ದೂರುಗಳು ಬಂದಲ್ಲಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಖಡಕ್ ಎಚ್ಚರಿಕೆ ನೀಡಿದರು.

ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ವೇತನವನ್ನು ಒದಗಿಸಬೇಕು. ಕಾರ್ಮಿಕರಿಗೆ ಪಿಎಫ್ ಸೌಲಭ್ಯ ಇರುವ ಕುರತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ವಸತಿ ನಿಲಯಗಳಲ್ಲಿರುವ ಸ್ವಚ್ಛತಾಗಾರರು ಸುರಕ್ಷತಾ ಪರಿಕರಿಗಳನ್ನು ಉಪಯೋಗಿಸಿ, ಸ್ವಚ್ಛತಾ ಕಾರ್ಯಕ್ಕೆ ಮುಂದಾಗಬೇಕು. ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ಸಮವಸ್ತ್ರಗಳನ್ನು ವಿತರಿಸಬೇಕು. ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಯೋಜನೆಗಳ ಕುರಿತು ಕಾರ್ಮಿಕರಿಗೆ ಮಾಹಿತಿ ಒದಗಿಸಬೇಕು. ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಸ್ವಚ್ಛತಾ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ನಡೆಸಬೇಕು. ಅವರಿಗೆ ಸುರಕ್ಷತಾ ಪರಿಕರಗಳನ್ನು ಪ್ರತಿ ಮೂರು ತಿಂಗಳಿಗೊಮ್ಮೆ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ವೇದಿಕೆಯಲ್ಲಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯ ಶಂಕರ, ಮಹಾದೇವಸ್ವಾಮಿ, ಜಿಲ್ಲಾಧಿಕಾರಿ ಸ್ನೇಹಲ್ ಆರ್., ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಪ್ರೊಬೇಶನರಿ ಐಎಎಸ್ ಅಧಿಕಾರಿ ಅನುಪ್ರಿಯಾ ಸಾಕ್ಯಾ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತ ಡಾ. ರುದ್ರೇಶ ಘಾಳಿ ಅವರು ಇದ್ದರು.

ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಜಗದೀಶ

Tags:

error: Content is protected !!