Savadatti

ಸವದತ್ತಿ ಬಳಿ ಗಾಂಜಾ ಸಾಗಿಸುತ್ತಿದ್ದ ಪೆಡ್ಲರ್ ಅರೆಸ್ಟ್: 58 ಸಾವಿರ ರೂ. ಮೌಲ್ಯದ ಮಾದಕ ದ್ರವ್ಯ ಜಪ್ತಿ

Share

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಹಿರೂರ ಗ್ರಾಮದ
ವ್ಯಕ್ತಿಯೊಬ್ಬ ಗಾಂಜಾ ಸಾಗಣೆ ಮಾಡುತ್ತಿದ್ದ ಪ್ರಕರಣವನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಭೇದಿಸಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಬಂಧಿತ ಆರೋಪಿಯನ್ನು ಹಿರೂರ ಗ್ರಾಮದ ಸುಭಾಷ ಕುರಿ ಎಂದು ಗುರುತಿಸಲಾಗಿದೆ. ಆರೋಪಿಯಿಂದ ಸುಮಾರು 58 ಸಾವಿರ ರೂ. ಮೌಲ್ಯದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸವದತ್ತಿ,‌ಧಾರವಾಡ ರಸ್ತೆಯಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಆರೋಪಿಯ ಚಲನವಲನ ಅನುಮಾನಾಸ್ಪದವಾಗಿ ಕಂಡುಬಂದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಆರೋಪಿಯ ಬಳಿಯಲ್ಲಿ ಗಾಂಜಾ ಪತ್ತೆಯಾಗಿದೆ.
ದಾಳಿಯಲ್ಲಿ ಅಬಕಾರಿ ನಿರೀಕ್ಷಕ ದಾವಲಸಾಬ್ ಸಿಂಧೋಗಿ, ಸಹಾಯಕ ಕೃಷಿ ನಿರ್ದೇಶಕ ಶಿವಪ್ರಕಾಶ ಪಾಟೀಲ, ಗ್ರಾಮ ಆಡಳಿತಾಧಿಕಾರಿ ರಾಮಚಂದ್ರ ತೆಕ್ಕೇವಾರಿ, ರವಿ ಕಲ್ಲಮ್ಮನವರ ಸೇರಿದಂತೆ ಸಿಬ್ಬಂದಿ ಭಾಗವಹಿಸಿದ್ದರು.ಈ ಕುರಿತು ಅಬಕಾರಿ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.

Tags:

error: Content is protected !!