ಪ್ರಧಾನಿ ನರೇಂದ್ರ ಮೋದಿ ಅವರು ಯಶಸ್ವಿಯಾಗಿ 12 ವರ್ಷಗಳಕಾಲ ಆಡಳಿತ ಪೂರೈಸಿದ ಹಿನ್ನೆಲೆಯಲ್ಲಿ ಚಿಕ್ಕೋಡಿಯ ಬಿಜೆಪಿ ಕಚೇರಿಯಲ್ಲಿ ಶಾಸಕಿ ಶಶಿಕಲಾ ಜೊಲ್ಲೆ ಹಾಗೂ ಮಾಜಿ ಎಂಎಲ್ಸಿ ಮಹಾಂತೇಶ ಕವಟಗಿಮಠ ಅವರ ಜಂಟಿ ಪತ್ರಿಕಾಗೋಷ್ಠಿ ನಡೆಯಿತು.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಶಾಸಕಿ ಶಶಿಕಲಾ ಜೊಲ್ಲೆ ಅವರು ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವ ಮೂಲಕ ಭಾರತವನ್ನು ಸಮೃದ್ಧ ಭಾರತವನ್ನಾಗಿ ಮಾಡಿದ್ದಾರೆ. ಹಿಂದೆ ಜಿಡಿಪಿಯಲ್ಲಿ 11ನೇ ಸ್ಥಾನದಲ್ಲಿದ್ದ ಭಾರತ ಇಂದು 4ನೇ ಸ್ಥಾನಕ್ಕೆ ಜಿಗಿದಿದೆ. ಮೋದಿ ಅವರ ದೂರದರ್ಶಿತ್ವದ ಆಡಳಿತದಿಂದಾಗಿ ದೇಶದ 2 ಕೋಟಿಗೂ ಹೆಚ್ಚು ಜನರು ಬಡತನದಿಂದ ಹೊರಬಂದಿದ್ದಾರೆ. ಭ್ರೂಣ ಹತ್ಯೆ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರಿಂದ ಹೆಣ್ಣು ಮಕ್ಕಳ ಸಂಖ್ಯೆಯಲ್ಲಿ ಸುಧಾರಣೆ ಕಂಡುಬಂದಿದೆ. 2047ರ ವೇಳೆಗೆ ಭಾರತವು ಜಗತ್ತಿನ ವಿಶ್ವಗುರು’ ಆಗಿ ಹೊರಹೊಮ್ಮಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಂದುವರಿದು ಮಾತನಾಡಿದ ಅವರು ಕಿಸಾನ್ ಸಮ್ಮಾನ ಪಶು ಸಂಗೋಪನೆ, ಸ್ವಚ್ಛ ಭಾರತ ಮಿಷನ್, ಪಿಎಂ ಆವಾಸ್ ಯೋಜನೆ, ಮಾತೃವಂದನಾ ಅಭಿಯಾನ ಹಾಗೂ ಪೋಷಣ್ ಅಭಿಯಾನ ಸೇರಿದಂತೆ ಕೇಂದ್ರ ಸರ್ಕಾರದ ಹಲವು ಜನಪರ ಯೋಜನೆಗಳು ಸಾರ್ವಜನಿಕರಿಗೆ ತಲುಪಿ ಆಸರೆಯಾಗಿವೆ. ಮೋದಿ ಸರ್ಕಾರವು ಯುವಕರ ಉದ್ಯೋಗ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಿಗೆ ಹೆಚ್ಚಿನ ಮಹತ್ವ ನೀಡಿದೆ” ಎಂದರು.
ಬಳಿಕ ಮಾತನಾಡಿದ ಮಾಜಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಅವರು ನರೇಂದ್ರ ಮೋದಿ ಅವರ ಆಡಳಿತ ಅವಧಿಯು ದೇಶದ ಜನರಲ್ಲಿ ಸಂತೃಪ್ತಿ ತಂದಿದೆ. ಜಲ ಜೀವನ್ ಮಿಷನ್ , ಪಿ ಎಂ ಕಿಸಾನ್, ಕಿಸಾನ್ ರೈಲು ಯೋಜನೆ, ಹೆಲ್ತ್ ಕಾರ್ಡ್, ಉಜ್ವಲ ಯೋಜನೆ, ಮುದ್ರಾ ಯೋಜನೆ, ಮಹಿಳಾ ಸ್ವಸಹಾಯ ಸಂಘಗಳಿಗೆ ಅನುದಾನ ಹಾಗೂ ಆಯುಷ್ಮಾನ್ ಭಾರತ್‌ನಂತಹ ಮಹತ್ವಾಕಾಂಕ್ಷಿ ಯೋಜನೆಗಳು ಜನಸಾಮಾನ್ಯರ ಜೀವನಮಟ್ಟವನ್ನು ಸುಧಾರಿಸಿವೆ ಎಂದು ಸರ್ಕಾರದ ಸಾಧನೆಗಳನ್ನು ಶ್ಲಾಘಿಸಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಶಾಸಕ ದುರ್ಯೋಧನ ಐಹೊಳೆ, ಮಾಜಿ ಶಾಸಕ ಮಹೇಶ ಕುಮಟಳ್ಳಿ, ಚಿಕ್ಕೋಡಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ ಅಪ್ಪಾಜಿಗೋಳ, ಮುಖಂಡರುಗಳಾದ ಮಹೇಶ ಭಾತೆ, ಅಮೃತ ಕುಲಕರ್ಣಿ, ಶಿವಾನಂದ ನವಲಿಹಾಳ, ದುಂಡಪ್ಪ ಭೇಂಡವಾಡೆ, ಶಾಂಭವಿ ಅಶ್ವತಪೂರ, ಶಕುಂತಲಾ ಡೊಣವಾಡೆ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
