ಶ್ರೀ ಅಂಜನಾದ್ರಿ ಬೆಟ್ಟದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಪರ ಘೋಷಣೆಗಳು ಮೊಳಗಿವೆ. “ಮುಂದಿನ ಮುಖ್ಯಮಂತ್ರಿ ಯತ್ನಾಳ್” ಎಂದು ಕಾರ್ಯಕರ್ತರು ಘೋಷಣೆ ಕೂಗಿ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ಹೌದು… ಹನುಮಾನ ಜನ್ಮಸ್ಥಳವೆಂದು ಪ್ರಸಿದ್ಧವಾಗಿರುವ ಶ್ರೀ ಅಂಜನಾದ್ರಿ ಬೆಟ್ಟದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಪರ ಘೋಷಣೆಗಳು ಮೊಳಗಿದವು. ಮುಂದಿನ ಮುಖ್ಯಮಂತ್ರಿ ಬಸನಗೌಡ ಪಾಟೀಲ ಯತ್ನಾಳ್” ಎಂಬ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು, ಯತ್ನಾಳ್ ಅವರ ನಾಯಕತ್ವಕ್ಕೆ ಬೆಂಬಲ ವ್ಯಕ್ತಪಡಿಸಿದರು. ಈ ವೇಳೆ ಹಲವು ಹಿಂದೂ ಕಾರ್ಯಕರ್ತರು ಉಪಸ್ಥಿತರಿದ್ದು, ಯತ್ನಾಳ್ ಮುಖ್ಯಮಂತ್ರಿ ಆಗಬೇಕು ಎಂಬ ಆಶಯ ವ್ಯಕ್ತಪಡಿಸಿದರು.
