ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ 12 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ವಿಶೇಷ ಹಸಿರು ಮತ್ತು ಸ್ವಚ್ಛತಾ ಉಪಕ್ರಮವೊಂದನ್ನು ಹಮ್ಮಿಕೊಳ್ಳಲಾಗಿತ್ತು. ನಗರದ ವಾರ್ಡ್ ಸಂಖ್ಯೆ 29ರ ಮಹಾತ್ಮಾ ಫುಲೆ ಉದ್ಯಾನವನದಲ್ಲಿ ಶಾಸಕ ಅಭಯ್ ಪಾಟೀಲ್ ಅವರ ಮಾರ್ಗದರ್ಶನ ಹಾಗೂ ಮಹಾನಗರ ಪಾಲಿಕೆ ಸದಸ್ಯ ನಿತಿನ್ ಜಾಧವ್ ಅವರ ನೇತೃತ್ವದಲ್ಲಿ ಬೃಹತ್ ಸ್ವಚ್ಛತಾ ಆಂದೋಲನ ಯಶಸ್ವಿಯಾಗಿ ಜರುಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ಯಶಸ್ವಿ 12 ವರ್ಷಗಳನ್ನು ಪೂರೈಸಿದ ಸವಿನೆನಪಿಗಾಗಿ ಬೆಳಗಾವಿಯ ವಾರ್ಡ್ ನಂಬರ್ 29ರಲ್ಲಿರುವ ಮಹಾತ್ಮಾ ಫುಲೆ ಗಾರ್ಡನ್‌ನಲ್ಲಿ ವಿಶೇಷ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ಶಾಸಕರಾದ ಅಭಯ್ ಪಾಟೀಲರ ಮಾರ್ಗದರ್ಶನದಲ್ಲಿ ಹಾಗೂ ಸ್ಥಳೀಯ ನಗರಸೇವಕ ನಿತಿನ್ಜಾಧವ್ ಅವರ ನೇತೃತ್ವದಲ್ಲಿ ‘ಮಾರ್ನಿಂಗ್ ವಾಕರ್ಸ್ ಗ್ರೂಪ್’ ವತಿಯಿಂದ ಈ ಶ್ಲಾಘನೀಯ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸ್ವಚ್ಛತಾ ಕಾರ್ಯಾಚರಣೆಯಲ್ಲಿ ಸುತ್ತಮುತ್ತಲಿನ ಸಾರ್ವಜನಿಕರು ಹಾಗೂ ಮುಂಜಾನೆ ವಾಯುವಿಹಾರಕ್ಕೆ ಆಗಮಿಸುವ ನಾಗರಿಕರು ಅತ್ಯಂತ ಉತ್ಸಾಹದಿಂದ ಭಾಗವಹಿಸಿದ್ದರು. ಇಡೀ ಉದ್ಯಾನವನದ ಆವರಣವನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿದ ಸಾರ್ವಜನಿಕರು, ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸದಾ ಸ್ವಚ್ಛವಾಗಿಟ್ಟುಕೊಳ್ಳುವ ಮತ್ತು ಸಮಾಜಕ್ಕೆ ಸ್ವಚ್ಛತೆಯ ಸಂದೇಶವನ್ನು ಸಾರುವ ದೃಢ ಸಂಕಲ್ಪವನ್ನು ಮಾಡಿದರು.

