ಬೈಕ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಶಿಕ್ಷಕ ದಂಪತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ತೊರವಿ ಬಳಿ ಭಾನುವಾರ ಸಂಜೆ ನಡೆದಿದೆ. ವಿಜಯಪುರ ತಾಲೂಕಿನ ಖತಿಜಾಪುರ ಎಚ್.ಪಿ.ಎಸ್ ಶಾಲೆಯ ಜಿಪಿಟಿ ಶಿಕ್ಷಕಿ ಅಂಬವ್ವ ಪೂಜೇರಿ (34) ಹಾಗೂ ಅವರ ಪತಿ, ಚಾಣಕ್ಯ ಕರಿಯರ್ ಅಕಾಡೆಮಿಯಲ್ಲಿ ಶಿಕ್ಷಕರಾಗಿದ್ದ ಗುರುಲಿಂಗ ಹುಣಶ್ಯಾಳ (37) ಎಂಬುವವರೇ ಮೃತರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪತಿ-ಪತ್ನಿ ಇಬ್ಬರೂ ತಿಕೋಟಾದಲ್ಲಿ ಸಂಬಂಧಿಕರ ಮನೆಯಲ್ಲಿ ಕಾರ್ಯಕ್ರಮ ಮುಗಿಸಿ ವಾಪಸ್ ಆಗುವಾಗ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
