ರಾಜ್ಯದಲ್ಲಿ ಮುಂಗಾರು ಮಳೆ ದುರ್ಬಲ ಆಗಿರೋದ್ರಿಂದ ಬರದ ಬಗ್ಗೆ ರೈತರಲ್ಲಿ ಆತಂಕ ಶುರುವಾಗಿದೆ. ಇತ್ತ ಆಲಮಟ್ಟಿ ಜಲಾಶಯದಲ್ಲಿ ಸಹಿತ ನೀರಿನಪ್ರಮಾಣ ಕಡಿಮೆಯಾಗಿದ್ದು ರೈತರಲ್ಲಿ ಮತ್ತಷ್ಟು ಆತಂಕ ಉಂಟು ಮಾಡಿದೆ. ಮಹಾರಾಷ್ಟ್ರ ದಿಂದ ಕೃಷ್ಣಾ ನದಿಗೆ ನೀರು ಹರಿಸುವಂತೆ ರೈತರು ಒತ್ತಾಯ ಮಾಡುತ್ತಿದ್ದಾರೆ. ಈ ಕುರಿತಾದ ಒಂದು ವರದಿ ಇಲ್ಲಿದೆ ನೋಡಿ…
ಹೌದು ವಿಜಯಪುರ ಜಿಲ್ಲೆಯ ಆಲಮಟ್ಟಿ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದಲ್ಲಿ ಕೇವಲ 4 ಟಿಎಂಸಿ ನೀರಿದೆ. ಇನ್ನೊಂದೆಡೆ ಈ ಹೊತ್ತಿನಲ್ಲಿ ಮುಂಗಾರು ಮಳೆ ಆಗಬೇಕಿತ್ತು. ಅತ್ತ ಮಹಾರಾಷ್ಟ್ರದಲ್ಲೂ ಮಳೆ ಇಲ್ಲ. ಹೀಗಾಗಿ ವಿಜಯಪುರ ಜಿಲ್ಲೆಯ ರೈತರಲ್ಲಿ ಆತಂಕ ಮತ್ತಷ್ಟು ಹೆಚ್ಚಿಸಿದೆ. ಪ್ರತಿ ಮುಂಗಾರು ಮಹಾರಾಷ್ಟ್ರ ರಾಜ್ಯದ ಪಶ್ಚಿಮ ಘಟ್ಟದಲ್ಲಿ ಮಳೆಯಾದರೆ ಕೃಷ್ಣಾ, ಘಟಪ್ರಭಾ, ನದಿಗೆ ನೀರು ಹರಿದು ಬರುತ್ತಿತ್ತು. ಆದ್ರೆ ಈ ಬಾರಿ ಮುಂಗಾರು ಮಳೆ ಕ್ಷೀಣಿಸಿದ್ದು. ಮುಂಬರುವ ದಿನಗಳಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಮತ್ತಷ್ಟು ಉಲ್ಬಣಗೊಳ್ಳವ ಸಾಧ್ಯತೆಯಿದೆ…

ಈಗಾಗಲೇ ಜಿಲ್ಲೆಯ ಬಹುತೇಕ ಕೆರೆಗಳು ಬತ್ತಿದ್ದು ಅಂತರ್ಜಲ ಮಟ್ಟ ಕುಸಿಯುವ ಆತಂಕ ರೈತರಲ್ಲಿ ಮನೆ ಮಾಡಿದೆ. ಹೀಗಾಗಿ ರಾಜ್ಯದ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿ ಜೊತೆಗೆ ಮಾತನಾಡಿ ಕೊಯ್ನಾ ಜಲಾಶಯದಿಂದ ಕನಿಷ್ಠ 10 ಟಿಎಂಸಿ ನೀರನ್ನು ಕೃಷ್ಣಾ ನದಿಗೆ ಬಿಡುಗಡೆ ಮಾಡಿಸಿದರೆ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಆಗಲಿದೆ. ಸರ್ಕಾರ ರಚನೆ, ಸಚಿವ ಸಂಪುಟ ವಿಸ್ತರಣೆಯಲ್ಲಿ ಕಾಲ ಕಳೆಯದೇ ಕೂಡಲೇ ರೈತರ ಸಮಸ್ಯೆ ಅರಿತು ಕೃಷ್ಣಾ ನದಿಗೆ ನೀರು ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ರೈತರು ಆಗ್ರಹಿಸಿದ್ದಾರೆ…
ಮುಂಗಾರು ಮಳೆ ನಿರೀಕ್ಷೆಯಲ್ಲಿದ್ದ ರೈತನಿಗೆ ಈಗ ಮಳೆ ಬಾರದೇ ಇರುವದು ಜಮೀನಲ್ಲಿ ಉಳುಮೆ ಮಾಡುವದು ಹೇಗೆ ಎಂಬ ಆತಂಕ ಮನೆ ಮಾಡಿದೆ. ಆದಷ್ಟು ಬೇಗಾ ಸಿಎಂ ಡಿ ಕೆ ಶಿವಕುಮಾರ್ ಈ ಕುರಿತು ಮಹಾರಾಷ್ಟ್ರ ಸರ್ಕಾರದೊಂದಿಗೆ ಮಾತನಾಡಿ ಕೃಷ್ಣಾ ನದಿಗೆ 10 ಟಿಎಂಸಿ ಯಷ್ಟು ನೀರು ಬಿಡಗಡೆ ಮಾಡಲು ಮುಂದಾಗಬೇಕಿದೆ…
