Dharwad

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರಕಿಸಲು ವಕೀಲರು ಮುಂದಾಗಬೇಕು-ನ್ಯಾಯಾಧೀಶ ಎಚ್.ಪಿ. ಸಂದೇಶ

Share

ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಾಮಾಜಿಕ ನ್ಯಾಯ ದೊರಕಿಸುವಲ್ಲಿ ಕಾನೂನು ಸೇವೆಯ ಪಾತ್ರ ಮಹತ್ವದ್ದಾಗಿದೆ. ನ್ಯಾಯಾಂಗ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸವನ್ನು ಉಳಿಸುವ ಜವಾಬ್ದಾರಿ ವಕೀಲರ ಮೇಲಿದೆ. ಕಕ್ಷಿದಾರರು ನ್ಯಾಯದ ಮೇಲೆ ವಿಶ್ವಾಸ ಇಟ್ಟು ನ್ಯಾಯಾಲಯಕ್ಕೆ ಬಂದಾಗ ಅವರಿಗೆ ನ್ಯಾಯ ಒದಗಿಸುವುದು ವಕೀಲರ ಕರ್ತವ್ಯವಾಗಿದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯ ಮತ್ತು ಆಡಳಿತ ನ್ಯಾಯಾಧೀಶ ಎಚ್.ಪಿ. ಸಂದೇಶ ಅವರು ಹೇಳಿದರು.

ನಗರದ ಕೃಷಿ ವಿಶ್ವವಿದ್ಯಾಲಯದ ರೈತ ಜ್ಞಾನ ಕೇಂದ್ರ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಹುಬ್ಬಳ್ಳಿ ಕಾನೂನು ಕಾಲೇಜು ಧಾರವಾಡ ವಲಯದ ಅಡಿಯಲ್ಲಿ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಧಾರವಾಡ ತರಗತಿಯಿಂದ ನ್ಯಾಯಾಲಯದ ಕೋಣೆಗೆ 4 ನೇ ವಲಯ ಕಾರ್ಯಾಗಾರಕ್ಕೆ ನಿಮ್ಮನ್ನು ಹೃತ್ಪೂರ್ವಕವಾಗಿ ಆಹ್ವಾನಿಸುತ್ತಿದೆ. ಕಾನೂನು ವಿದ್ಯಾರ್ಥಿ ಸಾಮಾಜಿಕ ನ್ಯಾಯಕ್ಕಾಗಿ ವೇಗವರ್ಧಕಗಳನ್ನು ಹೊಂದಿದ್ದಾನೆ ಎಂದು ಉದ್ಘಾಟಿಸಿ ಮಾತನಾಡಿದ ಅವರು, ಭವಿಷ್ಯದಲ್ಲಿ ವಕೀಲರಾಗುವ ಕಾನೂನು ವಿದ್ಯಾರ್ಥಿಗಳು ಅನ್ಯಾಯಕ್ಕೆ ಒಳಗಾದವರ ಧ್ವನಿಯಾಗಿ ಕಾರ್ಯನಿರ್ವಹಿಸಬೇಕು. ಇಲ್ಲವಾದರೆ ಕಪ್ಪು ಕೋಟ್ ಧರಿಸುವುದಕ್ಕೆ ಅರ್ಥವಿಲ್ಲ ಕಿವಿ ಮಾತು ಹೇಳಿದರು.

ಎಲ್‌ಎಲ್‌ಬಿ ವಿದ್ಯಾರ್ಥಿಗಳು ಶಿಸ್ತು, ಶ್ರಮ, ಸಮಯಪ್ರಜ್ಞೆ, ಆತ್ಮವಿಶ್ವಾಸ ಹಾಗೂ ನಿರ್ಭೀತಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ನೊಂದವರು, ವಿಧವೆಯರು ಹಾಗೂ ಅನ್ಯಾಯಕ್ಕೆ ಒಳಗಾದವರ ಪರವಾಗಿ ನಿಂತು ಅವರ ಹಕ್ಕುಗಳ ರಕ್ಷಣೆಗೆ ಮುಂದಾಗಬೇಕು. ದೇಶದ ವಿವಿಧ ಕಾನೂನುಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅತ್ಯಂತ ಅಗತ್ಯವಾಗಿದೆ. ವಿದ್ಯಾರ್ಥಿಗಳು ಕಾನೂನು ಶಿಕ್ಷಣ ಪಡೆಯುವುದರ ಜೊತೆಗೆ ಸಾಮಾಜಿಕ ಜವಾಬ್ದಾರಿಯನ್ನು ಅರಿತುಕೊಂಡು ನೊಂದ ಮತ್ತು ಶೋಷಿತ ಜನರಿಗೆ ನ್ಯಾಯ ದೊರೆಯುವಂತೆ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಸಿ.ಬಸವರಾಜು ಅವರು ಮಾತನಾಡಿ. ಮುಂದಿನ ದಿನಗಳಲ್ಲಿ ವಕೀಲರು ಹಾಗೂ ಕಾನೂನು ತಜ್ಞರಾಗಿ ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸುವ ಗುರಿ ಹೊಂದಬೇಕು. ಸಮಾಜದಲ್ಲಿ ಸಂಸ್ಕಾರ, ಸಂಸ್ಕೃತಿ ಹಾಗೂ ನೀತಿ ಮೌಲ್ಯಗಳನ್ನು ಬೆಳೆಸುವ ಮೂಲಕ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಜಾತಿ, ಧರ್ಮ, ಲಿಂಗ ಭೇದವಿಲ್ಲದೆ ಪ್ರತಿಯೊಬ್ಬರಿಗೂ ಸಮಾನ ನ್ಯಾಯ ದೊರೆಯಬೇಕು. ಕಾನೂನು ಎಲ್ಲರಿಗೂ ಒಂದೇ ಎಂಬ ಅರಿವು ಮೂಡಿದಾಗ ಮಾತ್ರ ಸಮಾಜದಲ್ಲಿ ಶಾಂತಿ, ನೆಮ್ಮದಿ ಮತ್ತು ಸಮಾನತೆ ನೆಲೆಸಲು ಸಾಧ್ಯ. ಕಾನೂನು ಜಾಗೃತಿಯ ಮೂಲಕ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ಹಾಗೂ ಪರಿವರ್ತನೆ ತರಬಹುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮತ್ತು ಅಧ್ಯಕ್ಷ ,ನೇರಳೆ ವೀರಭದ್ರಯ್ಯ ವಿಜಯ್, ಕೆಎಸ್ಎಲ್ಎಸ್ಎ.ಸದಸ್ಯ ಕಾರ್ಯದರ್ಶಿ ಹೆಚ್. ಶಶಿಧರ, ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಪಿ.ಯು. ಕೃಷ್ಣರಾಜ್, ವಕೀಲರು ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Tags:

error: Content is protected !!