ಬೆಳಗಾವಿ ಶಿವಬಸವ ನಗರದ ಎಸ್ ಜಿ ಬಾಳೆಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ಮೈದಾನದ ಆವರಣದಲ್ಲಿ ಜೂನ್ 21 ರಂದು ಬೆಳಗಿನ 6:30 ಗಂಟೆಗೆ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಮತ್ತು ಹಿಮಾಲಯನ್ ಧ್ಯಾನ ಯೋಗ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.
ನಾಗನೂರು ರುದ್ರಾಕ್ಷಿ ಮಠದ ವತಿಯಿಂದ ಏರ್ಪಡಿಸಲಾಗಿರುವ ಕಾರ್ಯಕ್ರಮದ ಸಾನ್ನಿಧ್ಯವನ್ನು ನಾಗನೂರು ರುದ್ರಾಕ್ಷಿ ಮಠದ ಪೀಠಾಧಿಕಾರಿ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳವರು ವಹಿಸಿಕೊಳ್ಳಲಿದ್ದಾರೆ. ಹಿಮಾಲಯನ್ ಯೋಗ ಸಾಧಕರಾದ ನಿರಂಜನ ಮಹಾಸ್ವಾಮಿಗಳು ಯೋಗ ಪ್ರಾತ್ಯಕ್ಷಿಕೆ ನೀಡಲಿದ್ದಾರೆ. ಬಸವನ ಬಾಗೇವಾಡಿಯ ಖ್ಯಾತ ವಾಗ್ಮಿ ಅಶೋಕ್ ಹಂಚಲಿ ಅವರು ಅತಿಥಿ ಉಪನ್ಯಾಸಕರಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.ಈ ಕಾರ್ಯಕ್ರಮದ ಲಾಭವನ್ನು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪಡೆದುಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.

