Khanapur

ಖಾನಾಪುರಕ್ಕೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ: ಸಸಿ ನೆಡುವ ಮೂಲಕ ವನಮಹೋತ್ಸವ ಆಚರಣೆ!

Share

ಕೆನರಾ ಲೋಕಸಭಾ ಕ್ಷೇತ್ರದ ನೂತನ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಖಾನಾಪುರ ತಾಲೂಕಿಗೆ ಭೇಟಿ ನೀಡಿದ್ದರು. ಈ ಭೇಟಿಯ ಅಂಗವಾಗಿ ಖಾನಾಪುರ ರೈಲ್ವೆ ನಿಲ್ದಾಣದ ಸಮೀಪವಿರುವ ಮಾರುತಿ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವನಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಸಿ ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಪ್ರಸ್ತುತ ದಿನಗಳಲ್ಲಿ ಮರಗಳ ಸಂಖ್ಯೆ ಕ್ಷೀಣಿಸುತ್ತಿರುವುದರಿಂದ ಪ್ರಕೃತಿಯಲ್ಲಿ ಅಸಮತೋಲನ ಉಂಟಾಗಿ ಮಳೆಯ ಅಭಾವ ತಲೆದೂರಿದೆ, ಆದ್ದರಿಂದ ಪ್ರತಿಯೊಬ್ಬರು ಕನಿಷ್ಠ ಒಂದು ಸಸಿಯನ್ನಾದರೂ ನೆಟ್ಟು ಪೋಷಿಸುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ಕರೆ ನೀಡಿದರು. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶವು ಪ್ರಗತಿಯತ್ತ ಮುನ್ನಡೆಯುತ್ತಿದೆ ಎಂದು ಶ್ಲಾಘಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಪ್ರಮೋದ ಕೋಚೇರಿ ಸಂಸದರನ್ನು ಸ್ವಾಗತಿಸಿದರೆ, ನ್ಯಾಯವಾದಿ ಚೇತನ ಮಣೇರಿಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯ ಮೇಲೆ ಸ್ಥಳೀಯ ಶಾಸಕರು, ಬೆಳಗಾವಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸಂಜಯ ಕುಬಳ, ಪ್ರಧಾನ ಕಾರ್ಯದರ್ಶಿ ಗುಂಡು ತೋಪಿನಕಟ್ಟಿ, ಮಲ್ಲಪ್ಪ ಮಾರಿಹಾಳ, ಧನಶ್ರೀ ಸರ್ದೇಸಾಯಿ, ಜ್ಯೋತಿಬಾ ರೇಮಾಣಿ, ಅಪ್ಪಯ್ಯ ಕೊಡೋಳಿ, ನಾರಾಯಣ ಓಗಳೆ, ಪಂಡಿತ ಓಗಳೆ, ವಿಶಾಲ ಸಾವಂತ, ಭರತ ಗೋರೆ ಹಾಗೂ ಗಜಾನನ ಪಾಟೀಲ ಸೇರಿದಂತೆ ಪ್ರಮುಖ ನಾಯಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. ನ್ಯಾಯವಾದಿ ಚೇತನ ಮಣೇರಿಕರ್ ಕಾರ್ಯಕ್ರಮದ ಕೊನೆಯಲ್ಲಿ ವಂದಿಸಿದರು.

Tags:

error: Content is protected !!