Accident

ಬೆಳಗಾವಿಯ ನಾಥಪೈ ವೃತ್ತದಲ್ಲಿ ಭೀಕರ ರಸ್ತೆ ಅಪಘಾತ: ಟ್ರಕ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ!

Share

ಬೆಳಗಾವಿಯ ನಗರದ ನಾಥಪೈ ವೃತ್ತದ ಬಳಿ ಬೈಕ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ದುರಂತ ಅಂತ್ಯ ಕಂಡಿದ್ದಾನೆ. ಇನ್ನು ಬೈಕ್ ಹಿಂಬದಿ ಕುಳಿತಿದ್ದ ಮತ್ತೊಬ್ಬ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಗಾವಿ ನಗರದ ನಾಥಪೈ ವೃತ್ತದ ಬಳಿ ಮಂಗಳವಾರದಂದು ಟ್ರಕ್ ಹಾಗೂ ಬೈಕ್ ನಡುವೆ ಅತ್ಯಂತ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅತಿವೇಗವಾಗಿ ಬಂದ ಟ್ರಕ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಚಲಾಯಿಸುತ್ತಿದ್ದ ಗಣೇಶ್ ಎಂಬ ಯುವಕ ತೀವ್ರ ರಕ್ತಸ್ರಾವದಿಂದಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಇನ್ನು ಬೈಕ್‌ನ ಹಿಂಬದಿಯಲ್ಲಿ ಕುಳಿತಿದ್ದ ಮತ್ತೊಬ್ಬ ವ್ಯಕ್ತಿಗೆ ದೇಹದ ಹಲವು ಭಾಗಗಳಿಗೆ ಗಂಭೀರವಾಗಿ ಗಾಯಗಳಾಗಿದ್ದು, ತಕ್ಷಣವೇ ಸ್ಥಳೀಯರು ಆತನನ್ನು ರಕ್ಷಿಸಿ ಹತ್ತಿರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ.

ಅಪಘಾತ ಸಂಭವಿಸುತ್ತಿದ್ದಂತೆಯೇ ಟ್ರಕ್ ಚಾಲಕ ವಾಹನವನ್ನು ಬಿಟ್ಟು ಸ್ಥಳದಿಂದ ಕಾಲ್ಕಿತ್ತಿದ್ದು, ಪೊಲೀಸರು ಆತನಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸಾರ್ವಜನಿಕರು ಹಾಗೂ ಟ್ರಾಫಿಕ್ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಭೀಕರ ಅಪಘಾತವು ಬೆಳಗಾವಿಯ ದಕ್ಷಿಣ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮವನ್ನು ಕೈಗೊಂಡಿದ್ದಾರೆ.

Tags:

error: Content is protected !!