ಕನಕಪುರದ ದೇಗುಲ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ನಿ.ಪ್ರ.ಸ್ವ ಡಾ. ಶ್ರೀ ಶ್ರೀ ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳು ಲಿಂಗೈಕ್ಯರಾಗಿದ್ದು, ಭಕ್ತ ವೃಂದ ಶೋಕಸಾಗರದಲ್ಲಿ ಮುಳುಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶ್ರೀಮಠಕ್ಕೆ ಭೇಟಿ ನೀಡಿ, ಪೂಜ್ಯರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ತ್ರಿವಿಧ ದಾಸೋಹಿ, ಸರಳತೆಯ ಸಾಕಾರಮೂರ್ತಿ ಹಾಗೂ ಸಹಸ್ರಾರು ವಿದ್ಯಾರ್ಥಿಗಳ ಬಾಳಿಗೆ ದಿವ್ಯಜ್ಯೋತಿಯಾಗಿದ್ದ ಮುಮ್ಮಡಿ ನಿರ್ವಾಣ ಶ್ರೀಗಳ ಅಗಲಿಕೆ ಕನಕಪುರದ ಮಹಾಜನತೆಗೆ ಹಾಗೂ ಭಕ್ತ ಸಮುದಾಯಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ. ಶ್ರೀಮಠದ ಪೀಠಾಧ್ಯಕ್ಷರಾಗಿ ಧರ್ಮ, ಸಂಸ್ಕೃತಿ, ಶಿಕ್ಷಣ ಮತ್ತು ಸಮಾಜ ಸೇವೆಯ ಮೂಲಕ ಅಪಾರ ಕೊಡುಗೆ ನೀಡಿದ್ದ ಪೂಜ್ಯರ ಅಗಲಿಕೆಗೆ ತೀವ್ರ ಸಂತಾಪ ಸೂಚಿಸಿರುವ ಸಿಎಂ ಡಿ.ಕೆ. ಶಿವಕುಮಾರ್, ಮಾತೃ ಹೃದಯಿ ಶ್ರೀಗಳ ಪವಿತ್ರ ಆತ್ಮಕ್ಕೆ ಭಗವಂತನು ಚಿರಶಾಂತಿ ನೀಡಲಿ ಹಾಗೂ ಭಕ್ತರಿಗೆ ಈ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
