Belagavi

ಬೆಳಗಾವಿಯಲ್ಲಿ ಎ.ಐ.ಡಿ.ಎಸ್.ಓ ವಿದ್ಯಾರ್ಥಿ ಸಂಘಟನೆಯ ಬೃಹತ್ ಪ್ರತಿಭಟನೆ:

Share

ನೀಟ್ ಪರೀಕ್ಷೆಯಲ್ಲಿ ನಡೆದಿರುವ ಬೃಹತ್ ಹಗರಣ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಇಂದು ಬೆಳಗಾವಿಯಲ್ಲಿ ಎ.ಐ.ಡಿ.ಎಸ್.ಓ ವಿದ್ಯಾರ್ಥಿ ಸಂಘಟನೆಯಿಂದ ಬೃಹತ್ ಮೆರವಣಿಗೆ ನಡೆಸಿ, ರಾಣಿ ಚೆನ್ನಮ್ಮ ವೃತ್ತದಲ್ಲಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಲಾಯಿತು.

ಇಂದು ಬೆಳಗಾವಿಯಲ್ಲಿ ಎ.ಐ.ಡಿ.ಎಸ್.ಓ ವಿದ್ಯಾರ್ಥಿ ಸಂಘಟನೆಯೂ ಬೃಹತ್ ಮೆರವಣಿಗೆಯ ಮೂಲಕ ಬೆಳಗಾವಿಯ ರಾಣಿ ಚೆನ್ನಮ್ಮ ವೃತ್ತಕ್ಕೆ ತಲುಪಿ ನೀಟ್ ಅಕ್ರಮವನ್ನು ಖಂಡಿಸಿ ಪ್ರತಿಭಟಿಸಲಾಯಿತು. ನಂತರ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಲಾಯಿತು.

ಈ ವೇಳೆ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಮುಖಂಡರು ಮಾತನಾಡಿ ದೇಶವ್ಯಾಪಿ ಶಿಕ್ಷಣ ವ್ಯವಸ್ಥೆ ಸರ್ವನಾಶವಾಗುತ್ತಿದೆ. ಸರ್ಕಾರಗಳಲ್ಲಿ ಪರೀಕ್ಷೆಗಳನ್ನು ನಿಯತ್ತಾಗಿ ಆಯೋಜಿಸುವ ಸಾಮರ್ಥ್ಯವಿಲ್ಲ. ಇತ್ತೀಚೆಗೆ ಮೇ 3 ರಂದು ನೀಟ್ ಪರೀಕ್ಷೆ ನಡೆಯಿತು. ದೇಶದ 27 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಪರೀಕ್ಷೆ ನಡೆದ ಒಂದೇ ವಾರದಲ್ಲಿ ಪರೀಕ್ಷೆ ನಡೆಸುತ್ತಿದ್ದ ನ್ಯಾಷನಲ್ ಟೆಸ್ಟಿಂಗ್ ಏಜೆಸ್ಸಿ, ಪ್ರಶ್ನೆ ಪತ್ರಿಕೆ ಸೋರಿಕೆಯ ಕಾರಣ ನೀಡಿ ನಡೆದ ಪರೀಕ್ಷೆಯನ್ನು ರದ್ಧುಗೊಳಿಸಿತು. ಸರ್ಕಾರಕ್ಕೆ ಇದರ ಮಾಹಿತಿ ಇತ್ತು. ವರ್ಷಾಂತರ ಗಟ್ಟಲೇ ತಯಾರಿ ನಡೆಸಿದ ಸುಮಾರು 19 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾದರು. ಇದು ಆತ್ಮಹತ್ಯೆಯಲ್ಲದೇ ಸರ್ಕಾರ ಮಾಡಿದ ಕೊಲೆ ಎಂದು ಆರೋಪಿಸಿದರು. ಸರ್ಕಾರ ತನ್ನ ತಪ್ಪು ಮುಚ್ಚಿಕೊಳ್ಳಲು ಮೆಡಿಕಲ್ ವಿದ್ಯಾರ್ಥಿಗಳ ಮೇಲೆ ಗೂಬೆ ಕೂರಿಸುತ್ತಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ಕೂಡಲೇ ನೀಡಬೇಕು. ಎಟಿಎ ರದ್ಧುಗೊಳಿಸಿ ಪಾರದರ್ಶಕ ಪರೀಕ್ಷೆ ನಡೆಸಬೇಕೆಂದು ಆಗ್ರಹಿಸಿದರು.

ಎ.ಐ.ಡಿ.ಎಸ್.ಓ ವಿದ್ಯಾರ್ಥಿ ಸಂಘಟನೆಯ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ಧರು.

Tags:

error: Content is protected !!