Belagavi

ಇಡಿ ದಾಳಿ ಬಗ್ಗೆ ನಮಗೆ ಮುನ್ಸೂಚನೆ ಇರಲಿಲ್ಲ, ವರದಿ ಬಂದ ಬಳಿಕವೇ ರಿಯಾಕ್ಷನ್:

Share

ಬಾಮೈದ ಹಾಗೂ ಬೆಳಗಾವಿಯ ಅಬಕಾರಿ ಹೆಚ್ಚುವರಿ ಆಯುಕ್ತ ವೈ ಮಂಜುನಾಥ ಮನೆ ಮೇಲೆ ಇಡಿ ಅಧಿಕಾರಿಗಳ ದಾಳಿಗೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. “ಈ ದಾಳಿಗಳ ಬಗ್ಗೆ ನಮಗೆ ಯಾವುದೇ ಮುನ್ಸೂಚನೆ ಇರಲಿಲ್ಲ ಮತ್ತು ಯಾವುದೇ ಮಾಹಿತಿ ಲಭ್ಯವಿಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಬಾಮೈದ ಹಾಗೂ ಬೆಳಗಾವಿಯ ಅಬಕಾರಿ ಹೆಚ್ಚುವರಿ ಆಯುಕ್ತ ವೈ ಮಂಜುನಾಥ ಮನೆ ಮೇಲೆ ಇಡಿ ಅಧಿಕಾರಿಗಳ ದಾಳಿಗೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. “ಈ ದಾಳಿಗಳ ಬಗ್ಗೆ ನಮಗೆ ಯಾವುದೇ ಮುನ್ಸೂಚನೆ ಇರಲಿಲ್ಲ ಮತ್ತು ಯಾವುದೇ ಮಾಹಿತಿ ಲಭ್ಯವಿಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಅಧಿಕಾರಿಗಳು ಯಾವ ಕಾರಣಕ್ಕಾಗಿ ಈ ದಾಳಿ ನಡೆಸಿದ್ದಾರೆ ಹಾಗೂ ಅವರ ಮುಂದಿನ ನಡೆ ಏನು ಎಂಬುದು ಸದ್ಯಕ್ಕೆ ತಿಳಿದಿಲ್ಲ ಎಂದು ತಿಳಿಸಿದ ಅವರು, ಈ ಬಗ್ಗೆ ನಿಖರವಾದ ವಿವರಗಳು ಮತ್ತು ವರದಿಗಳು ಹೊರಬಂದ ನಂತರವಷ್ಟೇ ಪ್ರತಿಕ್ರಿಯಿಸಲು ಸಾಧ್ಯ ಎಂದು ಹೇಳಿದ್ದಾರೆ. ಅಲ್ಲಿಯವರೆಗೆ ಯಾವುದೇ ಊಹಾಪೋಹಗಳಿಗೆ ಕಿವಿಗೊಡದಂತೆ ಮತ್ತು ನಾಳೆಯವರೆಗೆ ಕಾಯುವಂತೆ ಅವರು ತಿಳಿಸಿದ್ದಾರೆ.

ಇನ್ನು ಸಚಿವ ಸಂಪುಟ ವಿಸ್ತರಣೆ ವೇಳೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಲಕ್ಷ್ಮಣ್ ಸವದಿ ಅವರ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ಬಳಿ ಸದ್ಯಕ್ಕೆ ಯಾವುದೇ ಸಂಪೂರ್ಣ ಮಾಹಿತಿ ಇಲ್ಲ ಎಂದು ಅವರು ಈ ಕುರಿತು ಸಂಪೂರ್ಣ ವಿವರಗಳು ಲಭ್ಯವಾದ ನಂತರವಷ್ಟೇ ತಾವು ಈ ಬಗ್ಗೆ ಮಾತನಾಡುವುದಾಗಿ ಸಚಿವರು ಸ್ಪಷ್ಟಪಡಿಸಿದರು. ಅಶೋಕ್ ಪಟ್ಟಣ, ಮತಿನ್ ಕೌಜಲಗಿ ಮತ್ತು ಗಣೇಶ್ ಹುಕ್ಕೇರಿ ಸೇರಿದಂತೆ ಹಲವು ಹಿರಿಯ ನಾಯಕರು ಸಚಿವರಾಗಲು ಲೈನ್‌ ನಲ್ಲಿದ್ದಾರೆ. ಆದರೆ ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನಿಸಲಿದೆ ಎಂದು ತಿಳಿಸಿದರು. ಅಲ್ಲದೆ, ಜೂನ್ ತಿಂಗಳಲ್ಲಿ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಕಡಿಮೆ ಇದ್ದು, ಅದು ಜುಲೈನಲ್ಲಿ ನಡೆಯಬಹುದು ಎಂದು ಹೇಳಿದರು. ಇನ್ನು ಬೆಳಗಾವಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಮಾತನಾಡುತ್ತಾ, ಹಿಡಕಲ್ ಜಲಾಶಯದಲ್ಲಿ ಸದ್ಯಕ್ಕೆ ಕುಡಿಯುವ ನೀರು ಲಭ್ಯವಿದ್ದರೂ ಮಳೆಯಾಗದಿದ್ದರೆ ಕೃಷಿ ಭೂಮಿಗೆ ತೊಂದರೆಯಾಗಬಹುದು ಎಂದ ಸಚಿವರು, ಮುಂದಿನ 15 ದಿನಗಳವರೆಗೆ ನೀರಿನ ಸಮಸ್ಯೆ ಇರುವುದಿಲ್ಲ ಮತ್ತು ಪರಿಸ್ಥಿತಿಗೆ ತಕ್ಕಂತೆ ಸರ್ಕಾರ ಪರ್ಯಾಯ ವ್ಯವಸ್ಥೆಗಳನ್ನು ಮಾಡಲಿದೆ ಎಂದು ಭರವಸೆ ನೀಡಿದರು.

Tags:

error: Content is protected !!