ಬೆಳಗಾವಿಯಲ್ಲಿ ಇಂದು ಮುಂಜಾನೆಯೇ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಹೈವೋಲ್ಟೇಜ್ ದಾಳಿ ನಡೆಸಿದ್ದು, ಅಬಕಾರಿ ಇಲಾಖೆಯ ಉನ್ನತ ಅಧಿಕಾರಿ ಹಾಗೂ ಅವರ ಆಪ್ತ ಉದ್ಯಮಿಗೆ ಶಾಕ್ ನೀಡಿದ್ದಾರೆ.

ಬೆಳಗಾವಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ಮುಂಜಾನೆಯೇ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ಮಂಜುನಾಥ್ ಅವರೊಂದಿಗೆ ಆಪ್ತ ನಂಟು ಹೊಂದಿರುವ ಹಿನ್ನೆಲೆಯಲ್ಲಿ ಬೆಳಗಾವಿಯ ಹನುಮಾನ್ ನಗರದಲ್ಲಿರುವ ಪ್ರಮುಖ ರಿಯಲ್ ಎಸ್ಟೇಟ್ ಉದ್ಯಮಿ ನೂರಾನಿ ಅವರ ಮನೆ ಮೇಲೆಯೂ ಇಡಿ ಅಧಿಕಾರಿಗಳ ತಂಡ ಏಕಕಾಲಕ್ಕೆ ದಾಳಿ ಮಾಡಿದೆ. ಉದ್ಯಮಿ ನೂರಾನಿ ನಿವಾಸದಲ್ಲಿ ಅಧಿಕಾರಿಗಳು ಮಹತ್ವದ ದಾಖಲೆ ಪತ್ರಗಳು ಹಾಗೂ ಆಸ್ತಿಪಾಸ್ತಿ ವಿವರಗಳ ತಪಾಸಣೆ ತೀವ್ರಗೊಳಿಸಿದ್ದು, ಈ ಅವಳಿ ದಾಳಿಯು ಬೆಳಗಾವಿ ಜಿಲ್ಲೆಯಾದ್ಯಂತ ತೀವ್ರ ಸಂಚಲನ ಮೂಡಿಸಿದೆ.
