ಧಾರವಾಡದ ಸೆಂಟ್ ಜೋಸೆಫ್ ಹೈಸ್ಕೂಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಶಾಲೆಗೆ ಕೀರ್ತಿ ತಂದ ಸಾಧಕ ವಿದ್ಯಾರ್ಥಿಗಳನ್ನು ವಿಶೇಷವಾಗಿ ಸತ್ಕರಿಸಿ ಗೌರವಿಸಲಾಯಿತು.

ಧಾರವಾಡದ ಸೆಂಟ್ ಜೋಸೆಫ್ ಹೈಸ್ಕೂಲಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾದ ಹಯಾತ್ ಬಾವಾಖಾನ ಸೇರಿದಂತೆ ಇನ್ನಿತರ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸತ್ಕರಿಸಲಾಯಿತು. ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಿ ಮಾತನಾಡಿದ ಶಾಲೆಯ ಪ್ರಾಂಶುಪಾಲರಾದ ಫಾದರ್ ಸಿಲ್ವಾ ರೆಡ್ಡಿ ಅವರು, “ವಿದ್ಯಾರ್ಥಿಗಳು ಸತತ ಪರಿಶ್ರಮದಿಂದ ಅಧ್ಯಯನ ನಡೆಸಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಶಾಲಾ ಅವಧಿಯಲ್ಲಿ ಶಿಕ್ಷಕರು ನೀಡಿದ ಮಾರ್ಗದರ್ಶನ ಹಾಗೂ ಬುದ್ಧಿಮಾತುಗಳನ್ನು ಪಾಲಿಸಿ, ತಮ್ಮ ಹೆತ್ತವರ ಮತ್ತು ಶಾಲೆಯ ಕೀರ್ತಿಯನ್ನು ಸಮಾಜದಲ್ಲಿ ಎತ್ತಿಹಿಡಿಯುವ ನಿಟ್ಟಿನಲ್ಲಿ ಮುನ್ನಡೆಯಬೇಕು” ಎಂದು ಕರೆ ನೀಡಿ ಮುಂದಿನ ಭವಿಷ್ಯಕ್ಕೆ ಹಾರೈಸಿದರು. ಇದೇ ಸಂದರ್ಭದಲ್ಲಿ ಫಾದರ್ ಪ್ರಶಾಂತ್ ಪಿಂಟೋ, ಇಜೋಬಿಯರ್ ಡಿಸೋಜಾ ಹಾಗೂ ಶಿಕ್ಷಕಿಯರಾದ ಲೀನಾ ಅಲ್ಲಮೇಡಿಯಾ, ಶ್ರಿಜಾ ಗೋಮ್ಸ್ ಸೇರಿದಂತೆ ಶಾಲೆಯ ಇತರ ಶಿಕ್ಷಕ ವೃಂದದವರು ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಬೆನ್ನುತಟ್ಟಿದರು.
