Accident

ಬೆಳಗಾವಿಯಲ್ಲಿ ಭೀಕರ ಬೈಕ್ ಅಪಘಾತ: ಸ್ಥಳದಲ್ಲೇ ಸವಾರ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ!

Share

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಓರ್ವ ಸವಾರ ಸಾವನ್ನಪ್ಪಿದ್ದು, ಮತ್ತೊಬ್ಬನ ಪರಿಸ್ಥಿತಿ ಗಂಭೀರವಾಗಿದೆ.

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ. ಹುಬ್ಬಳ್ಳಿ ಬಳಿ ಎರಡು ಬೈಕ್‌ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ಮತ್ತೊಬ್ಬ ತೀವ್ರವಾಗಿ ಗಾಯಗೊಂಡಿದ್ದಾನೆ. ಗಾಯಾಳುವಿನ ಸ್ಥಿತಿ ಗಂಭೀರವಾಗಿದ್ದು, ತಕ್ಷಣವೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಪಘಾತಕ್ಕೊಳಗಾದ ಇಬ್ಬರೂ ಕಿತ್ತೂರು ತಾಲೂಕಿನ ವೀರಾಪೂರ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಕಿತ್ತೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ರಸ್ತೆ ಅಪಘಾತದ ಕುರಿತು ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:

error: Content is protected !!