Vijaypura

ವಿಜಯಪುರದಲ್ಲಿ ಮಳೆ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಸಚಿವ ಎಂ.ಬಿ.ಪಾಟೀಲರಿಂದ ಸೂಚನೆ-ನಗೆರದಲ್ಲಿ ಪರಿಶೀಲನೆ

Share

ವಿಜಯಪುರ ನಗರದ ಶಿವಾಜಿ ವೃತ್ತ, ನವಭಾಗ್ ಹಾಗೂ ಮನಗೂಳಿ ರಸ್ತೆ – ಕೋಟೆಗೋಡೆ ಕಂದಕ ಸಮೀಪದ ಬಡಾವಣೆಗಳ ಮಳೆ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳಲು ಸಚಿವ ಎಂ.ಬಿ.ಪಾಟೀಲ ಸೂಚಿಸಿದರು.

ಸಚಿವರು ಇಂದು ಶಿವಾಜಿ ವೃತ್ತದ ಹತ್ತಿರ ಕೋಟೆ ಗೋಡೆಗೆ ಹೊಂದಿಕೊಂಡಿರುವ ರಾಜಕಾಲುವೆ ಮಹಾನಗರಪಾಲಿಕೆ ವತಿಯಿಂದ ಸ್ವಚ್ಛಗೊಳಿಸುವ ಕಾರ್ಯವನ್ನು ಉಸ್ತುವಾರಿ ಸಚಿವರಾದ ಎಂ ಬಿ ಪಾಟೀಲ್ ರವರು ಪರಿಶೀಲಿಸಿದರು.. ಅಧಿಕ ಮಳೆಯ ಸಂದರ್ಭದಲ್ಲಿ ವಿಜಯಪುರ ನಗರದ ಶಿವಾಜಿ ವೃತ್ತ, ನವಭಾಗ್ ಸೇರಿದಂತೆ ಸುತ್ತಮುತ್ತಲಿನ ಬಡಾವಣೆಗಳಿಗೆ ಮಳೆ ನೀರು ನುಗ್ಗಿ ಸಾರ್ವಜನಿಕರಿಗೆ ಅಪಾರ ಪ್ರಮಾಣದ ತೊಂದರೆ ಹಾಗೂ ಆಸ್ತಿ ಹಾನಿ ಉಂಟಾಗುತ್ತಿತ್ತು. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಈ ಹಿನ್ನೆಲೆಯಲ್ಲಿ ಶಿವಾಜಿ ವೃತ್ತ, ನವಭಾಗ್ ಹಾಗೂ ಮನಗೂಳಿ ರಸ್ತೆ–ಕೋಟೆಗೋಡೆ ಕಂದಕದ ಬಳಿ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿಯನ್ನು ಖುದ್ದಾಗಿ ಪರಿಶೀಲಿಸಿದರು. ಕಾಮಗಾರಿಗೆ ಅಗತ್ಯವಿರುವ ಆರ್ಥಿಕ ವ್ಯವಸ್ಥೆ ಕಲ್ಪಿಸುವುದಾಗಿ ತಿಳಿಸಿದ್ದು, ಕಾಮಗಾರಿಯನ್ನು ಗುಣಮಟ್ಟದೊಂದಿಗೆ ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಡಾ ಆನಂದ ಕೆ , ಆಯುಕ್ತರಾದ ಶ್ರೀ ವಿಜಯಕುಮಾರ್ ಮೆಕ್ಕಳಕಿ, ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀ ಎಂ ಎಸ್ ಕರಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಗಂಗಾಧರ್ ಸಂಬಣ್ಣಿ, ಪಾಲಿಕೆಯ ಸದಸ್ಯರಾದ ಶಿವರುದ್ರ ಬಾಗಲಕೋಟ, ರಾಹುಲ್ ಜಾದವ, ರಾಜಶೇಖರ್ ಮಗೀಮಠ , ಅಧಿಕಾರಿಗಳು, ಸಿಬ್ಬಂದಿಗಳು, ಮುಂತಾದವರು ಉಪಸ್ಥಿತರಿದ್ದರು.

Tags:

error: Content is protected !!