Belagavi

ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ನೂತನ ಜಿಲ್ಲಾಧ್ಯಕ್ಷರಾಗಿ ಅಶ್ವಿನಿ ಬೆಳವಡಿ ಆಯ್ಕೆ; ಧರ್ಮಕ್ಕಿಂತ ಬದುಕು ಮುಖ್ಯ ಎಂದ ಸಚಿವ ಸತೀಶ್ ಜಾರಕಿಹೊಳಿ

Share

ಚುನಾವಣೆಗಳು ಬಂದಾಗ ದೇಶದ ಅಭಿವೃದ್ಧಿಯನ್ನು ಬದಿಗಿಟ್ಟು ಧರ್ಮವನ್ನು ಮುನ್ನೆಲೆಗೆ ತರಲಾಗುತ್ತದೆ. ಆದರೆ ಜನಸಾಮಾನ್ಯರಿಗೆ ಧರ್ಮಕ್ಕಿಂತ ಬದುಕು, ಉದ್ಯೋಗ ಮತ್ತು ಆರ್ಥಿಕ ಭದ್ರತೆ ಮುಖ್ಯ” ಎಂದು ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಪ್ರತಿಪಾದಿಸಿದ್ದಾರೆ.

ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್‌ನ ಮಹಿಳಾ ಘಟಕದ ನೂತನ ಅಧ್ಯಕ್ಷರಾಗಿ ಅಶ್ವಿನಿ ಬೆಳವಡಿ ಅವರು ಆಯ್ಕೆಯಾಗಿದ್ದಾರೆ. ನಗರದ ಕಾಂಗ್ರೆಸ್ ಭವನದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ನೂತನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಅಧಿಕೃತ ಪ್ರಮಾಣ ಪತ್ರ ವಿತರಿಸಿದರು.ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಮಹಿಳಾ ಘಟಕದ ಬ್ಲಾಕ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಮಹತ್ವದ ಸಭೆಯಲ್ಲಿ ಪಾಲ್ಗೊಂಡು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಮಾತನಾಡಿದರು. ಚುನಾವಣೆಗಳು ಬಂದಾಗ ಅಭಿವೃದ್ಧಿಯನ್ನು ಬದಿಗಿಟ್ಟು ಧರ್ಮವನ್ನು ಮುನ್ನೆಲೆಗೆ ತರಲಾಗುತ್ತದೆ. ಆದರೆ ನಮಗೆ ಧರ್ಮಕ್ಕಿಂತ ಬದುಕು, ಉದ್ಯೋಗ ಮತ್ತು ಆರ್ಥಿಕ ಭದ್ರತೆ ಮುಖ್ಯ ಎಂದು ಅವರು ಪ್ರತಿಪಾದಿಸಿದರು. ಮುಂಬರುವ ಗ್ರಾಮ ಪಂಚಾಯಿತಿ, ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸಲು ಮಹಿಳಾ ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸಬೇಕಾಗಿದೆ. ಕಾಂಗ್ರೆಸ್ ಪಕ್ಷದ ಸುದೀರ್ಘ ಇತಿಹಾಸ, ಸರ್ಕಾರದ ಸಾಧನೆಗಳು ಹಾಗೂ ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಮನೆಮನೆಗೆ ತಲುಪಿಸಬೇಕು. ಈ ಮೂಲಕ ಕ್ಷೇತ್ರದಲ್ಲಿ ಶೇಕಡಾ 50 ರಷ್ಟಿರುವ ಮಹಿಳಾ ಮತದಾರರನ್ನು ಪಕ್ಷದತ್ತ ಆಕರ್ಷಿಸಲು ಪದಾಧಿಕಾರಿಗಳು ಶ್ರಮಿಸಬೇಕು ಎಂದು ಸಚಿವರು ಕರೆ ನೀಡಿದರು.
ಈ ಸಂದರ್ಭದಲ್ಲಿ ಪಕ್ಷದ ಪ್ರಮುಖ ಮುಖಂಡರು ಹಾಗೂ ನೂರಾರು ಮಹಿಳಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

Tags:

error: Content is protected !!