Belagavi

ಹತ್ತು ಲಕ್ಷಕ್ಕೂ ಅಧಿಕ ಮೌಲ್ಯದ ಮಾದಕ ವಸ್ತುಗಳನ್ನು ಸುಟ್ಟು ಭಸ್ಮಗೊಳಿಸಿದ ಬೆಳಗಾವಿ ಪೊಲೀಸ್ ಇಲಾಖೆ!

Share

ಬೆಳಗಾವಿ ಜಿಲ್ಲೆಯಲ್ಲಿ ಮಾದಕ ಜಾಲದ ವಿರುದ್ಧ ಪೊಲೀಸರು ಸಮರ ಸಾರಿದ್ದಾರೆ. ಎನ್‌ಡಿಪಿಎಸ್ ಕಾಯ್ದೆಯಡಿ ವಶಪಡಿಸಿಕೊಳ್ಳಲಾಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಭಾರಿ ಪ್ರಮಾಣದ ಡ್ರಗ್ಸ್ ಅನ್ನು ಜಿಲ್ಲಾ ಡ್ರಗ್ಸ್ ಡಿಸ್ಪೋಸಲ್ ಕಮಿಟಿ ಸಮ್ಮುಖದಲ್ಲಿ ಯಶಸ್ವಿಯಾಗಿ ನಾಶಪಡಿಸಲಾಗಿದೆ.
ಬೆಳಗಾವಿ ಜಿಲ್ಲೆಯ ಒಟ್ಟು 14 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಅಕ್ರಮ ಮಾರಾಟ, ಸಾಗಾಣಿಕೆ ಹಾಗೂ ಬೆಳೆ ಕಡೆಯಿಂದ ಜಪ್ತಿ ಮಾಡಲಾಗಿದ್ದ 23 ಎನ್‌ಡಿಪಿಎಸ್ ಪ್ರಕರಣಗಳಿಗೆ ಸಂಬಂಧಿಸಿದ ಮಾದಕ ವಸ್ತುಗಳನ್ನು ನಾಶಪಡಿಸಲಾಗಿದೆ. ನ್ಯಾಯಾಲಯ ಹಾಗೂ ಮಾಲಿನ್ಯ ನಿಯಂತ್ರಣಾಧಿಕಾರಿಗಳ ಅಧಿಕೃತ ಅನುಮತಿಯೊಂದಿಗೆ, ಜಿಲ್ಲಾ ಡ್ರಗ್ಸ್ ಡಿಸ್ಪೋಸಲ್ ಕಮಿಟಿಯು ಅಂದಾಜು 10,41,500 ರೂಪಾಯಿ ಮೌಲ್ಯದ ಒಟ್ಟು 22 ಕೆಜಿ 500 ಗ್ರಾಂ ತೂಕದ ಮಾದಕ ವಸ್ತುಗಳನ್ನು ಜೂನ್ 25, 2026 ರಂದು ಸಂಜೆ 4:30 ಗಂಟೆಗೆ ಸವದತ್ತಿ ತಾಲೂಕಿನ ಮುರುಗೋಡ ಪೊಲೀಸ್ ಠಾಣೆ ವ್ಯಾಪ್ತಿಯ ಹಾರುಗೊಪ್ಪ ಗ್ರಾಮದ ಹದ್ದಿಯಲ್ಲಿರುವ ‘ದಿ ಬೆಳಗಾಂ ಗ್ರೀನ್ ಎನ್ವಿರಾನ್‌ಮೆಂಟಲ್ ಮ್ಯಾನೇಜ್ಮೆಂಟ್ ಪ್ರೈವೇಟ್ ಲಿಮಿಟೆಡ್’ ಘಟಕದಲ್ಲಿ ನಿಯಮಾನುಸಾರ ಸಂಪೂರ್ಣವಾಗಿ ನಿಷ್ಕ್ರಿಯಗೊಳಿಸಿದೆ.

Tags:

error: Content is protected !!