ಬೆಳಗಾವಿ ತಾಲೂಕಿನ ಹಂದಿಗನೂರು ಗ್ರಾಮದಲ್ಲಿಂದು ಸುಸಜ್ಜಿತ ವಾಲ್ಮೀಕಿ ಸಮುದಾಯ ಭವನ ನಿರ್ಮಾಣಕ್ಕೆ ಚಾಲನೆ ಸಿಕ್ಕಿದೆ. ಲೋಕೋಪಯೋಗಿ ಸಚಿವ ಸತೀಶ್ ಜಾರಕೀಹೊಳಿ ಹಾಗೂ ಸಂಸದೆ ಪ್ರಿಯಾಂಕಾ ಜಾರಕೀಹೊಳಿ ಅವರ ನಿರ್ದೇಶನದಂತೆ ಈ ಪ್ರಗತಿ ಕಾರ್ಯಕ್ಕೆ ಮುನ್ನುಡಿ ಬರೆಯಲಾಗಿದೆ.


ಬೆಳಗಾವಿ ಜಿಲ್ಲೆಯ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವರಾದ ಶ್ರೀ ಸತೀಶ್ ಜಾರಕೀಹೊಳಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದರಾದ ಕುಮಾರಿ ಪ್ರಿಯಾಂಕಾ ಜಾರಕೀಹೊಳಿ ಹಾಗೂ ಯುವ ನಾಯಕ ಶ್ರೀ ರಾಹುಲ್ ಜಾರಕೀಹೊಳಿ ಅವರ ಆದೇಶದ ಮೇರೆಗೆ, ಕಡೋಲಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಹಂದಿಗನೂರು ಗ್ರಾಮದಲ್ಲಿಂದು ಅಂದಾಜು 20 ಲಕ್ಷ ರೂಪಾಯಿ ವೆಚ್ಚದ ವಾಲ್ಮೀಕಿ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಯಿತು. ಸಚಿವರ ಆಪ್ತ ಸಹಾಯಕರು ಹಾಗೂ ಕೆಪಿಸಿಸಿ ಸದಸ್ಯರಾದ ಮಲಗೌಡಾ ಪಾಟೀಲ್ ಅವರು ಭೂಮಿ ಪೂಜೆಯ ನೇತೃತ್ವ ವಹಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಹಂದಿಗನೂರು ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು ಹಾಗೂ ಗ್ರಾಮದ ಮುಖಂಡರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

