Accident

ಬಾಗಲಕೋಟೆ: ಯಡಹಳ್ಳಿ ಬಳಿ ಭೀಕರ ಬೈಕ್ ಅಪಘಾತ; ಸ್ಥಳದಲ್ಲೇ ಯುವಕ ದುರ್ಮರಣ, ಮತ್ತೊಬ್ಬನ ಸ್ಥಿತಿ ಗಂಭೀರ

Share

ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಯಡಹಳ್ಳಿ ಬಳಿ ನಡೆದ ಈ ದುರಂತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ಮತ್ತೊಬ್ಬ ಯುವಕ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾನೆ.

ಬೀಳಗಿ ತಾಲೂಕಿನ ಗಲಗಲಿ–ಯಡಹಳ್ಳಿ ರಸ್ತೆ ಮಧ್ಯೆ ಈ ಕರುಣಾಜನಕ ಘಟನೆ ನಡೆದಿದೆ. ಅಪಘಾತದಲ್ಲಿ ಬಾಡಗಿ ಗ್ರಾಮದ ನಿವಾಸಿಯಾದ ರವಿ ಬಸಪ್ಪ ಧೂಪದ (25) ಎಂಬ ಯುವಕ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾನೆ. ಇನ್ನು ಬೈಕ್‌ನಲ್ಲಿದ್ದ ಮತ್ತೊಬ್ಬ ಯುವಕ ಬಾಳಪ್ಪ ಮಲ್ಲಪ್ಪ ಕುಸ್ತಿ (24) ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು, ಆತನನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಬೀಳಗಿ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Tags:

error: Content is protected !!