Khanapur

ಇಟಗಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ: ಮಳೆಯ ನಡುವೆಯೂ ಮಕ್ಕಳೊಂದಿಗೆ ಬಂದ ಪೋಷಕರು

Share

ಖಾನಾಪುರ ತಾಲೂಕಿನ ಇಟಗಿಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಮಳೆಯ ಆರ್ಭಟದ ನಡುವೆಯೂ ಪೋಷಕರು ಸಕ್ರಿಯವಾಗಿ ಭಾಗವಹಿಸಿ, ತಮ್ಮ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಜಾಗೃತಿ ಮೆರೆದಿದ್ದಾರೆ.

ಇಟಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ. ಪೂಜಾ ಅವರು ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಈ ಮಹತ್ವಾಕಾಂಕ್ಷೆಯ ಅಭಿಯಾನಕ್ಕೆ ಅಧಿಕೃತ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, “ಹುಟ್ಟಿದ ಮಗುವಿನಿಂದ ಹಿಡಿದು ಐದು ವರ್ಷದ ಒಳಗಿನ ಪ್ರತಿಯೊಂದು ಮಗುವಿಗೂ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು” ಎಂದು ಪೋಷಕರಿಗೆ ಕರೆ ನೀಡಿದರು. ಇತ್ತೀಚಿನ ಭಾರಿ ಮಳೆಯ ನಡುವೆಯೂ ನೂರಾರು ಪೋಷಕರು ತಮ್ಮ ಮಕ್ಕಳನ್ನು ಕರೆತಂದು ಲಸಿಕೆ ಹಾಕಿಸಿದರು. ಭೂಮಿಗೆ ಮಳೆ ಎಷ್ಟು ಅವಶ್ಯಕವೋ, ಮಕ್ಕಳ ಆರೋಗ್ಯಕರ ಭವಿಷ್ಯಕ್ಕೆ ಎರಡು ಹನಿ ಪೋಲಿಯೋ ಲಸಿಕೆ ಅಷ್ಟೇ ಮುಖ್ಯ ಎಂಬುದನ್ನು ಅರಿತ ಸಾರ್ವಜನಿಕರು, ಡಾ. ಪೂಜಾ ಅವರ ಕರೆಗೆ ಕೈಜೋಡಿಸಿ ಪೋಲಿಯೋ ಮುಕ್ತ ಭಾರತ ನಿರ್ಮಾಣಕ್ಕೆ ತನು-ಮನದಿಂದ ಸಹಕರಿಸಿದರು.

Tags:

error: Content is protected !!