ಬೇರೆ ರಾಜ್ಯದಲ್ಲಿ ವೋಟ್ ಇಟ್ಟುಕೊಂಡು, ನಮ್ಮ ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ಸಾಧ್ಯವಿಲ್ಲ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಆಗಿ ಹೇಳಿದ್ದಾರೆ. ರಾಜ್ಯಾದ್ಯಂತ ಇಂದಿನಿಂದ ಆರಂಭವಾಗಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ) ಅಭಿಯಾನಕ್ಕೆ ಇಂದು ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರದ ಸೌಲಭ್ಯಗಳು ನಮ್ಮ ರಾಜ್ಯದ ಜನರಿಗೆ ಮಾತ್ರ ಸಿಗಬೇಕು ಎನ್ನುವುದು ಸರ್ಕಾರದ ಚಿಂತನೆಯಾಗಿದೆ. ಹೀಗಾಗಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ.

ರಾಜ್ಯಾದ್ಯಂತ ಇಂದಿನಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಅಭಿಯಾನ ಆರಂಭಗೊಂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಸದಾಶಿವನಗರ ನಿವಾಸದಲ್ಲಿ ಅಧಿಕಾರಿಗಳಿಂದ ಗಣತಿ ನಮೂನೆಯನ್ನು ಪಡೆದು, ಭರ್ತಿ ಮಾಡುವ ಮೂಲಕ ಈ ಮಹತ್ವದ ಅಭಿಯಾನಕ್ಕೆ ಅಧಿಕೃತ ಚಾಲನೆ ನೀಡಿದ್ದಾರೆ. ಮತದಾರರ ಜಾಗೃತಿ ಹಾಗೂ ಪಟ್ಟಿ ಸರಿಪಡಿಸುವ ನಿಟ್ಟಿನಲ್ಲಿ ಇಂದಿನಿಂದ ಆರಂಭವಾಗಿರುವ ವಿಶೇಷ ಸಮಗ್ರ ಪರಿಷ್ಕರಣೆ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಿಎಂ ಅವರ ತವರೂರು ಕನಕಪುರದ ದೊಡ್ಡಾಲಹಳ್ಳಿಯನ್ನು ಒಳಗೊಂಡ ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಹಾಗೂ ಚುನಾವಣಾ ಅಧಿಕಾರಿಗಳು ಉಪಸ್ಥಿತರಿದ್ದರು. ಸಾರ್ವಜನಿಕರು ತಮ್ಮ ಮನೆ ಬಾಗಿಲಿಗೆ ಬರುವ ಬಿಎಲ್ಒ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡಿ, ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಖಚಿತಪಡಿಸಿಕೊಳ್ಳಬೇಕು ಹಾಗೂ ಅಗತ್ಯವಿದ್ದರೆ ತಿದ್ದುಪಡಿ ಮಾಡಿಕೊಳ್ಳಬೇಕು ಎಂದು ಸಿಎಂ ಮನವಿ ಮಾಡಿದರು.
ಚಾಲನೆ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ಮತದಾನದ ಹಕ್ಕು ಹೊಂದುವುದು ಅತ್ಯಂತ ಮುಖ್ಯ ಎಂದು ಸ್ಪಷ್ಟಪಡಿಸಿದರು. ಬೇರೆ ರಾಜ್ಯಗಳಲ್ಲಿ ಸರ್ಕಾರದ ಸೌಲಭ್ಯಗಳನ್ನು ನಿಲ್ಲಿಸುತ್ತಿರುವ ಉದಾಹರಣೆಗಳಿವೆ, ಅದೇ ಮಾನದಂಡ ನಮ್ಮ ರಾಜ್ಯಕ್ಕೂ ಅನ್ವಯಿಸಬಹುದು. ನಮ್ಮ ರಾಜ್ಯದ ಜನರಿಗೆ ಮಾತ್ರ ಈ ಸೌಲಭ್ಯ ಸಿಗಬೇಕು ಎನ್ನುವುದು ನಮ್ಮ ಚಿಂತನೆಯಾಗಿದೆ. ಹೀಗಾಗಿ, ಎಲ್ಲೋ ವೋಟ್ ಇಟ್ಟುಕೊಂಡು ಇಲ್ಲೇ ಗ್ಯಾರಂಟಿ ಪಡೆಯಲು ಸಾಧ್ಯವಿಲ್ಲ; ರಾಜ್ಯದ ನಾಗರಿಕರು ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಅವರು ಜನತೆಗೆ ಕರೆ ನೀಡಿದರು.
