bagalkot

ಜಮಖಂಡಿ: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಭೀಕರ ಕೊಲೆ; ಮೂವರು ಆರೋಪಿಗಳು ಪೊಲೀಸ್ ವಶಕ್ಕೆ

Share

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಚಿಕ್ಕಪಡಸಲಗಿ ಆರ್ ಸಿ ಪ್ಲಾಟ್‌ನಲ್ಲಿ ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಯುವಕನೊಬ್ಬನನ್ನು ನೇಣಿಗೆ ಹಾಕಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಮೃತನ ತಾಯಿ ನೀಡಿದ ದೂರಿನನ್ವಯ ಸಾವಳಗಿ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಚಿಕ್ಕಪಡಸಲಗಿ ಆರ್ ಸಿ ಪ್ಲಾಟ್‌ನಲ್ಲಿ ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಲ್ಲಪ್ಪ ಕಬ್ಬೂರ (27) ಎಂಬ ಯುವಕನನ್ನು ನೇಣಿಗೆ ಹಾಕಿ ಕೊಲೆ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಘಟನೆ ಸಂಭವಿಸಿದ ವಿಷಯ ತಿಳಿಯುತ್ತಿದ್ದಂತೆ ಸಾವಳಗಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತನ ತಾಯಿ ಬಸವ್ವ ಕಬ್ಬೂರ ಅವರು ನೀಡಿದ ದೂರಿನ ಆಧಾರದ ಮೇಲೆ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ತೊದಲಬಾಗಿ ಗ್ರಾಮದ ನಿವಾಸಿಗಳಾದ ಮಲ್ಲವ್ವ, ಮಲ್ಲಪ್ಪ ಮತ್ತು ಅಭಿಷೇಕ್ ಎಂಬ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಮೂವರ ವಿರುದ್ಧವೂ ಕೊಲೆ ಪ್ರಕರಣ ದಾಖಲಾಗಿದ್ದು, ಸಾವಳಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಈ ಭೀಕರ ಹತ್ಯೆಯ ಹಿಂದಿನ ನಿಖರ ಕಾರಣವನ್ನು ಪತ್ತೆಹಚ್ಚಲು ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

Tags:

error: Content is protected !!