ಖಾನಾಪೂರದಲ್ಲಿ ಭಾರತ ಚುನಾವಣಾ ಆಯೋಗದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನ ಆರಂಭವಾಗಿದ್ದು, ಸಾರ್ವಜನಿಕರು ಇದಕ್ಕೆ ಸಂಪೂರ್ಣ ಸಹಕಾರ ನೀಡಬೇಕೆಂದು ಬಿಜೆಪಿ ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿದೆ. ಇದೇ ವೇಳೆ ತಮ್ಮ ವಿರುದ್ಧದ ಕ್ರಾಸ್ ವೋಟಿಂಗ್ ವದಂತಿಗಳನ್ನು ಶಾಸಕ ವಿಠ್ಠಲ್ ಹಲಗೇಕರ ತೀವ್ರವಾಗಿ ಖಂಡಿಸಿದ್ದಾರೆ.

ಭಾರತ ಚುನಾವಣಾ ಆಯೋಗದ ವಿಶೇಷ ಸಂಕ್ಷಿಪ್ತ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಅಂಗವಾಗಿ ಖಾನಾಪೂರ ತಾಲೂಕಿನ 312 ಮತಗಟ್ಟೆಗಳಲ್ಲಿ ಬಿಎಲ್‌ಒ ಅಧಿಕಾರಿಗಳು ಮನೆ ಮನೆಗೆ ತೆರಳಿ ಮತದಾರರ ಮಾಹಿತಿ ನಿಖರಗೊಳಿಸುವ ಕಾರ್ಯ ಆರಂಭಿಸಿದ್ದು, ನಕಲಿ ಹೆಸರುಗಳನ್ನು ತೆಗೆದುಹಾಕಲು ಸಾರ್ವಜನಿಕರು ಆಡಳಿತಕ್ಕೆ ಸಹಕರಿಸಬೇಕೆಂದು ಬಿಜೆಪಿ ಮುಖಂಡರು ಕರೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಾಸಕ ವಿಠ್ಠಲ್ ಹಲಗೇಕರ, ಪ್ರಸ್ತುತ 2002 ಮತ್ತು 2025ರ ಮತದಾರರ ಪಟ್ಟಿಯ ಮ್ಯಾಪಿಂಗ್ ಕಾರ್ಯ ನಡೆಯುತ್ತಿದ್ದು, ಎರಡು ಕಡೆ ಹೆಸರಿರುವವರು ಒಂದೇ ಕಡೆ ಉಳಿಸಿಕೊಳ್ಳಬೇಕು ಎಂದು ತಿಳಿಸಿದರು; ಜೊತೆಗೆ, ಇತ್ತೀಚಿನ ವಿಧಾನ ಪರಿಷತ್ ಚುನಾವಣೆಯಲ್ಲಿ ತಾವು ಕ್ರಾಸ್ ವೋಟಿಂಗ್ ಮಾಡಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ವದಂತಿಗಳು ತದ್ವಿರುದ್ಧ ಹಾಗೂ ತಮ್ಮ ಮಾನಹಾನಿ ಮಾಡುವ ಅಪಪ್ರಚಾರ ಎಂದು ಸ್ಪಷ್ಟನೆ ನೀಡಿದರು. ಮಾಜಿ ಶಾಸಕ ಅರವಿಂದ್ ಪಾಟೀಲ್ ಹಾಗೂ ಪಕ್ಷದ ಪ್ರಮುಖರು ಈ ಅಭಿಯಾನದಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.
– ಅಲ್ತಾಫ್ ಎಂ ಬಸರೀಕಟ್ಟಿ, ಇನ್ ನ್ಯೂಸ್ ಖಾನಾಪೂರ
