Vijaypura

ರಾಜ್ಯವನ್ನು ಬರಗಾಲ ಪೀಡಿತ ಜಿಲ್ಲೆ ಎಂದು ಘೋಷಿಸಿ ತಕ್ಷಣವೇ ಪರಿಹಾರ ನೀಡಲು ಸರ್ಕಾರ ಮುಂದಾಗಲಿ; ರೈತ ಮುಖಂಡ ಅರವಿಂದ ಕುಲಕರ್ಣಿ

Share

ರಾಜ್ಯವನ್ನು ಬರಗಾಲ ಪೀಡಿತ ಜಿಲ್ಲೆ ಎಂದು ಘೋಷಿಸಿ ತಕ್ಷಣವೇ ಪರಿಹಾರ ನೀಡಲು ಸರ್ಕಾರ ಮುಂದಾಗಬೇಕು ಎಂದು ವಿಜಯಪುರ ಜಿಲ್ಲಾ ರೈತ ಸಂಘದ ಅಧ್ಯಕ್ಷ ಅರವಿಂದ ಕುಲಕರ್ಣಿ ಒತ್ತಾಯಿಸಿದ್ದಾರೆ.‌ವಿಜಯಪುರ ನಗರದಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಪ್ರಸ್ತುತ ತಲೆದೋರಿರುವ ಬರ ಪರಿಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ. ಜಲಾಶಯಗಳಲ್ಲಿ ಕೇವಲ ಕುಡಿಯುವ ನೀರಿಗಷ್ಟೇ ಮೊದಲ ಆದ್ಯತೆ ನೀಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ತಿಳಿಸಿದ್ದಾರೆ. ಮಳೆ ಅಭಾವದ ಹಿನ್ನೆಲೆಯಲ್ಲಿ ಕಾವೇರಿ ಮತ್ತು ಕೃಷ್ಣಾ ಕೊಳ್ಳದ ಪ್ರಮುಖ ಅಣೆಕಟ್ಟುಗಳಲ್ಲಿ ನೀರಿನ ಒಳಹರಿವು ಸಂಪೂರ್ಣ ಕುಂಠಿತಗೊಂಡಿದ್ದು, ಕೃಷಿ ಚಟುವಟಿಕೆಗಳಿಗೆ ನೀರು ಹರಿಸುವುದು ಕಷ್ಟಸಾಧ್ಯ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ರೈತ ಮುಖಂಡ ಜೂನ್ ತಿಂಗಳು ಮುಗಿದು ಜುಲೈ ಮೊದಲ ವಾರ ಬಂದರೂ ಇನ್ನೂ ಮಳೆಯಾಗಿಲ್ಲಾ. ಇನ್ನೂ ಯಾವ ರೈತರು ಬಿತ್ತನೆ ಮಾಡಿಲ್ಲಾ, ಹೀಗಾಗಿ ತಕ್ಷಣವೇ ಬರಗಾಲ ಪೀಡಿತ ರಾಜ್ಯ ಎಂದು ಘೋಷಣೆ ಮಾಡಿ ಪರಿಹಾರ ನೀಡಿ ರೈತರ ಸಂಕಷ್ಟಕ್ಕೆ ಸ್ಪಂದಿಸಲು ಆಗ್ರಹಿಸಿದ್ದಾರೆ.

Tags:

error: Content is protected !!