State

ಪತ್ನಿ ಉಷಾ, ತಮ್ಮ ಡಿಕೆ ಸುರೇಶ್ ಜೊತೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿಯಾದ ಡಿ ಕೆ ಶಿವಕುಮಾರ್: ಶೀಘ್ರದಲ್ಲೇ ಉಭಯ ನಾಯಕರು ದೆಹಲಿಗೆ ಪ್ರಯಾಣ

Share

ಪತ್ನಿ ಉಷಾ, ತಮ್ಮ ಡಿಕೆ ಸುರೇಶ್ ಜೊತೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿಯಾದ ಡಿಕೆ ಶಿವಕುಮಾರ್: ಶೀಘ್ರ ಉಭಯ ನಾಯಕರು ದೆಹಲಿಗೆ ಸಿಎಂ ಡಿಕೆ ಶಿವಕುಮಾರ್ ಶುಕ್ರವಾರ ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದರು.


ಕನಕಪುರಕ್ಕೆ ತೆರಳುವ ಮುನ್ನ ಈ ಭೇಟಿ ನಡೆದಿದ್ದು, ಉಭಯ ನಾಯಕರು ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಿದರು. ಪತ್ನಿ ಉಷಾ, ಸಹೋದರ ಡಿಕೆ ಸುರೇಶ್ ಜತೆ ಸಿದ್ದರಾಮಯ್ಯ ನಿವಾಸಕ್ಕೆ ತೆರಳಿದ ಡಿಕೆಶಿ ಮಾಜಿ ಸಿಎಂ ಜತೆ ಉಪಾಹಾರ ಸೇವಿಸಿದರು. ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಸಂಪುಟ ವಿಸ್ತರಣೆಯಲ್ಲಿ ಯಾವುದೇ ತೊಡಕುಗಳು ಉಂಟಾಗಬಾರದು ಎಂಬ ನಿಟ್ಟಿನಲ್ಲಿ ಈ ಚರ್ಚೆಗಳು ನಡೆದಿವೆ. ಎರಡನೇ ಹಂತದ ಸಚಿವರ ಪಟ್ಟಿ ಅಂತಿಮಗೊಳಿಸುವ ಸಾಧ್ಯತೆಯ ಬಗ್ಗೆಯೂ ಗಂಭೀರವಾಗಿ ಪರಿಗಣಿಸಲಾಗಿದೆ. ಈ ವಿಚಾರವಾಗಿ ಹೈಕಮಾಂಡ್ ಜತೆ ಚರ್ಚಿಸಲು ಸಿಎಂ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಶೀಘ್ರದಲ್ಲೇ ದೆಹಲಿಗೆ ತೆರಳಲಿದ್ದಾರೆ.

ಈ ದೆಹಲಿ ಪ್ರವಾಸಕ್ಕೂ ಮುನ್ನ ಉಭಯ ನಾಯಕರು ಪರಸ್ಪರ ಭೇಟಿಯಾಗಿ ಕುಶಲೋಪರಿ ವಿಚಾರಿಸಿ, ಸಚಿವ ಸಂಪುಟ ರಚನೆ ಸಂಬಂಧ ಪ್ರಾಥಮಿಕ ಚರ್ಚೆ ನಡೆಸಿದ್ದಾರೆ.

Tags:

error: Content is protected !!