Vijaypura

ಟಿಪ್ಪರ್-ಲಾರಿ ನಡುವೆ ಅಪಘಾತ; ಬೈಕ್ ಸವಾರ ಸಾವು, ಮಹಿಳೆ ಗಂಭೀರ

Share

ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದಲ್ಲಿ ಟಿಪ್ಪರ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದು, ಬೈಕ್‌ನಲ್ಲಿದ್ದ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಪಟ್ಟಣದ ಬಾಹುಬಲಿ ಮುತ್ತಿನ ಬಟ್ಟೆ ಅಂಗಡಿ ಎದುರು ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ಪುರುಷ ಹಾಗೂ ಗಾಯಗೊಂಡ ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ. ಇಬ್ಬರೂ ದಂಪತಿಗಳಾಗಿ ರಬಹುದೆಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.


ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಚಡಚಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತರು ಹಾಗೂ ಗಾಯಾಳುವಿನ ಗುರುತು ಪತ್ತೆ ಮಾಡಲು ಕ್ರಮ ಕೈಗೊಂಡಿದ್ದಾರೆ. ಈ ಕುರಿತು ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Tags:

error: Content is protected !!