Khanapur

ಖಾನಾಪುರ: ವೈದ್ಯರ ದಿನಾಚರಣೆ ಅಂಗವಾಗಿ ತಾಲೂಕಾ ಆರೋಗ್ಯಾಧಿಕಾರಿ ಡಾ. ಮಹೇಶ್ ಕಿವಡಸನ್ನವರಗೆ ಭವ್ಯ ಸತ್ಕಾರ!

Share

ರಾಷ್ಟ್ರೀಯ ವೈದ್ಯರ ದಿನಾಚರಣೆ ನಿಮಿತ್ಯ ಖಾನಾಪುರ ತಾಲೂಕಾ ವೈದ್ಯರ ಸಂಘದ ವತಿಯಿಂದ ತಾಲೂಕಾ ಆರೋಗ್ಯಾಧಿಕಾರಿಗಳಾದ ಡಾ. ಮಹೇಶ್ ಕಿವಡಸನ್ನವರ ಅವರಿಗೆ ಗೌರವಪೂರ್ವಕ ಸನ್ಮಾನ ಹಮ್ಮಿಕೊಳ್ಳಲಾಗಿತ್ತು. ತಾಲೂಕಿನಲ್ಲಿ ಅವರು ನೀಡುತ್ತಿರುವ ಗಮನಾರ್ಹ ಆರೋಗ್ಯ ಸೇವೆಗಳನ್ನು ಪರಿಗಣಿಸಿ ಈ ಗೌರವ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಖಾನಾಪುರ ತಾಲೂಕಾ ವೈದ್ಯರ ಸಂಘದ ಅಧ್ಯಕ್ಷರಾದ ಡಾ. ಡಿ. ಇ. ನಾಡಗೌಡ ಅವರು ಆರೋಗ್ಯಾಧಿಕಾರಿಗಳಿಗೆ ಹಾರ, ಶಾಲು ಹಾಗೂ ಪುಷ್ಪಗುಚ್ಛ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ಸಮಾಜದ ಆರೋಗ್ಯಕರ ಜೀವನಕ್ಕಾಗಿ ಹಗಲಿರುಳು ಶ್ರಮಿಸುವ ವೈದ್ಯರ ಕೊಡುಗೆ ಅತ್ಯಂತ ಮಹತ್ವದ್ದು ಎಂದು ಶ್ಲಾಘಿಸಿದರು. ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುತ್ತಿರುವ ತಾಲೂಕಾ ಆರೋಗ್ಯಾಧಿಕಾರಿಗಳ ಕಾರ್ಯವೈಖರಿಯನ್ನು ಇದೇ ವೇಳೆ ಮುಕ್ತಕಂಠದಿಂದ ಪ್ರಶಂಸಿಸಲಾಯಿತು. ಕಾರ್ಯಕ್ರಮದಲ್ಲಿ ಡಾ. ಸುದರ್ಶನ ಸುಳ್ಕರ್, ಸಂಘದ ಕಾರ್ಯದರ್ಶಿ ಡಾ. ಸಾಗರ ನಾರ್ವೇಕರ್ ಸೇರಿದಂತೆ ತಾಲೂಕಾ ವೈದ್ಯರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದು ಕೃತಜ್ಞತೆ ಸಲ್ಲಿಸಿದರು.

Tags:

error: Content is protected !!