Accident

ರಾಯಬಾಗ ಬಳಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ!

Share

ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ಇಂದು ಮತ್ತೊಂದು ರಸ್ತೆ ಅಪಘಾತಕ್ಕೆ ರಕ್ತ ಹರಿದಿದೆ. ಕಾರ್ ಹಾಗೂ ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಓರ್ವ ಯುವಕ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾನೆ. ಸದ್ಯ ತೀವ್ರವಾಗಿ ಗಾಯಗೊಂಡಿರುವ ಮತ್ತೊಬ್ಬನನ್ನು ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ಹೊರವಲಯದ ಚಿಂಚಲಿ ಮುಖ್ಯ ರಸ್ತೆ ಬಳಿ ಕಾರ್ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ವಾಹನಗಳ ನಡುವಿನ ಈ ಕರಾಳ ಡಿಕ್ಕಿಗೆ ಪರಮಾನಂದವಾಡಿ ಗ್ರಾಮದ ನಿವಾಸಿ ಸಂತೋಷ ರಾಣಾ ಎಂಬ ದುರ್ದೈವಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಅಪಘಾತದ ತೀವ್ರತೆಗೆ ಬೈಕ್‌ನಲ್ಲಿದ್ದ ಮತ್ತೊಬ್ಬ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಆತನನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆ ನಡೆದ ತಕ್ಷಣ ರಾಯಬಾಗ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಕುರಿತು ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣ ಏನೆಂಬುದರ ಬಗ್ಗೆ ತನಿಖೆ ಮುಂದುವರಿದಿದೆ.

Tags:

error: Content is protected !!