ಖಾನಾಪುರ ತಾಲೂಕಿನ ನಂದಗಡದ ಬಸಪ್ಪಣ್ಣ ಅರಗಾವಿ ಇಂಗ್ಲಿಷ್ ಮೇಡಿಯಮ್ ಶಾಲೆಯಲ್ಲಿ ಸೋಮವಾರ ದಿನಾಂಕ 6 ರಂದು ಬೆಳಿಗ್ಗೆ 10:30 ಕ್ಕೆ ಸರಿಯಾಗಿ ಶಾಲಾ ಆವರಣದಲ್ಲಿ ಬಹುಮಾನ ವಿತರಣಾ ಸಮಾರಂಭ ಜರುಗಲಿದೆ. ‘ಇಂಡಿಯನ್ ಟ್ಯಾಲೆಂಟ್ ಒಲಿಂಪಿಕ್ಸ್ 2025-26’ ರಲ್ಲಿ ಶಾಲೆಯ ವಿದ್ಯಾರ್ಥಿಗಳು ತೋರಿದ ಅಭೂತಪೂರ್ವ ಪ್ರದರ್ಶನವನ್ನು ಶ್ಲಾಘಿಸಿ ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಎನ್.ಆರ್.ಇ ಸಂಸ್ಥೆಯ ಅಧ್ಯಕ್ಷರಾದ ಸಿ.ಜಿ. ವಾಲಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ನಂದಗಡ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಸಾಗರಕುಮಾರ್ ಬಿರಾದಾರ ಹಾಗೂ ಹಿರಿಯ ಪತ್ರಕರ್ತರಾದ ಅಪ್ಪಾಜಿ ಪಾಟೀಲ ಮತ್ತು ಅಲ್ತಾಫ್ ಬಸರೀಕಟ್ಟಿ ಸೇರಿದಂತೆ ಹಲವು ಪ್ರಮುಖ ಗಣ್ಯರು ಭಾಗವಹಿಸಲಿದ್ದಾರೆ. ವಿದ್ಯಾರ್ಥಿಗಳ ಈ ಐತಿಹಾಸಿಕ ಸಾಧನೆಯನ್ನು ಪ್ರೋತ್ಸಾಹಿಸಲು ಪೋಷಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿರಬೇಕಾಗಿ ಶಾಲೆಯ ಪ್ರಾಂಶುಪಾಲರಾದ ನೇಹಾ ದಲಾಲ ಅವರು ಪ್ರಕಟಣೆಯ ಮೂಲಕ ಕೋರಿದ್ದಾರೆ.

