Kittur

ಕಿತ್ತೂರಿನಲ್ಲಿ ಕುಡಿಯುವ ನೀರಿಗಾಗಿ ದಂಪತಿಯ ದಯಾಮರಣ ಹೋರಾಟದ ಎಚ್ಚರಿಕೆ: ಪಟ್ಟಣ ಪಂಚಾಯತಿ ಎದುರು ಜುಲೈ 6 ರಿಂದ ಸತ್ಯಾಗ್ರಹ!

Share

ಕುಡಿಯುವ ನೀರಿನ ಸಂಪರ್ಕವನ್ನು ಉದ್ದೇಶಪೂರ್ವಕವಾಗಿ ಸ್ಥಗಿತಗೊಳಿಸಿರುವುದಾಗಿ ಆರೋಪಿಸಿ ನ್ಯಾಯ ದೊರಕದಿದ್ದರೆ ದಯಾಮರಣ ಸತ್ಯಾಗ್ರಹ ಕೈಗೊಳ್ಳುವುದಾಗಿ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಮಂಜುನಾಥ ರುದ್ರಪ್ಪ ಸವದಿ ಹಾಗೂ ಶೃತಿ ಮಂಜುನಾಥ ಸವದಿ ಈ ಕುರಿತು ತಹಶಿಲ್ದಾರಗೆ ಮನವಿ ಸಲ್ಲಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ತಮ್ಮ ಮನೆಯ ಕುಡಿಯುವ ನೀರಿನ ನಲ್ಲಿಯನ್ನು ಪಟ್ಟಣ ಪಂಚಾಯತಿ ಸದಸ್ಯರು ಹಾಗೂ ಸಿಬ್ಬಂದಿಗಳು ಉದ್ದೇಶಪೂರ್ವಕವಾಗಿ ಬಂದ್ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಇಲಾಖೆಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ನ್ಯಾಯ ಸಿಕ್ಕಿಲ್ಲ ಎಂದು ದಂಪತಿ ದೂರಿದ್ದಾರೆ. ಕುಡಿಯುವ ನೀರಿನಂತಹ ಮೂಲಭೂತ ಸೌಲಭ್ಯ ಕಳೆದುಕೊಂಡ ಪರಿಣಾಮ ಕುಟುಂಬ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಮಾನಸಿಕ ಹಾಗೂ ಆರ್ಥಿಕ ಒತ್ತಡ ಎದುರಿಸುತ್ತಿರುವುದಾಗಿ ತಿಳಿಸಿದ್ದಾರೆ.

ತಮಗೆ ಆಗುತ್ತಿರುವ ಅನ್ಯಾಯವನ್ನು ತಕ್ಷಣ ಸರಿಪಡಿಸಿ ಕುಡಿಯುವ ನೀರಿನ ವ್ಯವಸ್ಥೆ ಪುನಃ ಕಲ್ಪಿಸಿಕೊಡಬೇಕು. ಇಲ್ಲವಾದಲ್ಲಿ ಜು. 6ರಿಂದ ಕಿತ್ತೂರು ಪಟ್ಟಣ ಪಂಚಾಯತಿ ಕಚೇರಿ ಎದುರು ದಯಾಮರಣ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

Tags:

error: Content is protected !!