Vijaypura

ಸರ್ಕಾರಿ ಶಾಲೆಯಲ್ಲೇ ಕುಳಿತು SIR ಪ್ರಕ್ರಿಯೆ; BLOಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

Share

ವಿಜಯಪುರ ಜಿಲ್ಲೆಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಮತ್ತೆ ಯಡವಟ್ಟು ಬೆಳಕಿಗೆ ಬಂದಿದೆ. ಮನೆ ಮನೆಗೆ ತೆರಳಿ ಮತದಾರರ ಮಾಹಿತಿ ಸಂಗ್ರಹಿಸಬೇಕಿದ್ದ ಸಿಬ್ಬಂದಿ ಸರ್ಕಾರಿ ಶಾಲೆಯಲ್ಲೇ ಕುಳಿತು ಫಾರ್ಮ್ ವಿತರಣೆ ಮಾಡುತ್ತಿರುವ ಆರೋಪ ಕೇಳಿಬಂದಿದೆ. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಗ್ರಾಮದಲ್ಲಿ BLOಗಳು ಹಾಗೂ ಸಿಬ್ಬಂದಿ ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಪರಿಶೀಲನೆ ನಡೆಸುವ ಬದಲು ಸರ್ಕಾರಿ ಶಾಲೆಯಲ್ಲೇ ಕುಳಿತು SIR ಪ್ರಕ್ರಿಯೆ ನಡೆಸಿದ್ದಾರೆ ಎನ್ನಲಾಗಿದೆ.

ಗ್ರಾಮಸ್ಥರಿಗೆ ಶಾಲೆಗೆ ಬರುವಂತೆ ತಿಳಿಸಿ ಅಲ್ಲಿಯೇ ಫಾರ್ಮ್‌ಗಳನ್ನು ವಿತರಿಸಿ ಮಾಹಿತಿ ಸಂಗ್ರಹಿಸ ಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ನಿಯಮಾನುಸಾರ ಮನೆ ಮನೆಗೆ ತೆರಳಿ ಪರಿಶೀಲನೆ ನಡೆಸ ಬೇಕಿದ್ದರೂ ಅದನ್ನು ಪಾಲಿಸದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ವೇಳೆ ಶಾಲೆಗೆ ಆಗಮಿಸಿದ ಗ್ರಾಮಸ್ಥರು BLOಗಳು ಹಾಗೂ ಸಿಬ್ಬಂದಿಯ ಕ್ರಮವನ್ನು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದರು. ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯವನ್ನು ನಿಯಮಾನುಸಾರ ಮತ್ತು ಪಾರದರ್ಶಕವಾಗಿ ನಡೆಸುವಂತೆ ಒತ್ತಾಯಿಸಿದರು.
ಘಟನೆ ಕುರಿತು ಚುನಾವಣಾ ಅಧಿಕಾರಿಗಳು ಯಾವ ಕ್ರಮ ಕೈಗೊಳ್ಳಲಿದ್ದಾರೆ ಎಂಬುದು ಕಾದು ನೋಡಬೇಕಿದೆ.

 

Tags:

error: Content is protected !!