ಮಹಾರಾಷ್ಟ್ರದ ಪ್ರಭಾವಿ ರಾಜಕಾರಣಿ ಹಾಗೂ ಸಂಸದರಾದ ಶ್ರೀಕಾಂತ್ ಶಿಂಧೆ ಅವರು ನಿನ್ನೆ ಸಂಜೆ ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ.

ಮಹಾರಾಷ್ಟ್ರದ ಲೋಕಸಭಾ ಸದಸ್ಯರಾದ ಶ್ರೀಕಾಂತ್ ಶಿಂಧೆ ಅವರು ನಿನ್ನೆ ಸಂಜೆ ಕೊಲ್ಲೂರು ಶ್ರೀ ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ (EO) ಪ್ರಶಾಂತ್ ಶೆಟ್ಟಿ ಅವರು ಸಂಸದರನ್ನು ಗೌರವಪೂರ್ವಕವಾಗಿ ಬರಮಾಡಿಕೊಂಡರು. ಇವರೊಂದಿಗೆ ಬೆಳಗಾವಿಯ ಪ್ರಮುಖ ನಾಯಕರಾದ ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಮಾಜಿ ಕಾರ್ಯನಿರ್ವಹಣಾಧಿಕಾರಿ ರವಿ ಕೊಟಾರಗಸ್ತಿ ಹಾಗೂ ಶ್ರೀ ಗುರುದೇವ ರಾನಡೆ ಮಂದಿರದ ಟ್ರಸ್ಟಿಗಳಾದ ಸುಬ್ರಹ್ಮಣ್ಯ ಭಟ್ ಅವರು ಉಪಸ್ಥಿತರಿದ್ದು, ಒಟ್ಟಾಗಿ ದೇವಿಯ ಕೃಪೆಗೆ ಪಾತ್ರರಾದರು.
