Ramdurg

ಕರುಳು ಕುದಿಯುವ ಕೃತ್ಯ….:

Share

ಹೆತ್ತ ತಾಯಿಯೇ ಹುಟ್ಟಿದ ಕಂದಮ್ಮನನ್ನೇ ಕಸದ ರಾಶಿಗೆ ಎಸೆದು ಹೋಗಿರುವ ಅಮಾನವೀಯ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಿತ್ತೂರು ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ಕಿತ್ತೂರು–ನರಗುಂದ ರಸ್ತೆಯ ಬಸವಣಕಟ್ಟಿ ಸೇತುವೆ ಕೆಳಭಾಗದಲ್ಲಿ ಕಸದ ನಡುವೆ ನವಜಾತ ಗಂಡು ಶಿಶುವನ್ನು ಎಸೆದು ದುಷ್ಕರ್ಮಿ ತಾಯಿ ಪರಾರಿಯಾಗಿದ್ದಾಳೆ ಎನ್ನಲಾಗಿದೆ. ಮಗುವಿನ ಅಳುವಿನ ಶಬ್ದ ಕೇಳಿದ ಕುರಿಗಾಯಿಗಳು ಸ್ಥಳಕ್ಕೆ ಧಾವಿಸಿ ಶಿಶುವನ್ನು ರಕ್ಷಿಸಿದ್ದಾರೆ.
ಬಳಿಕ ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು, ನವಜಾತ ಶಿಶುವನ್ನು ಚಿಕಿತ್ಸೆಗಾಗಿ ಸವದತ್ತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಮಗುವಿನ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ.

ಮಾಹಿತಿ ತಿಳಿಯುತ್ತಿದ್ದಂತೆ ಸುರೇಬಾನ ಪೊಲೀಸ್ ಠಾಣೆಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಿಶುವನ್ನು ಕಸಕ್ಕೆ ಎಸೆದು ಹೋಗಿರುವ ಮಹಿಳೆಯನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಮಾಹಿತಿ ಹಾಗೂ ಲಭ್ಯವಿರುವ ಸುಳಿವುಗಳ ಆಧಾರದ ಮೇಲೆ ಪರಿಶೀಲನೆ ಮುಂದುವರಿದಿದೆ.
ಈ ಅಮಾನವೀಯ ಘಟನೆ ಸಾರ್ವಜನಿಕರಲ್ಲಿ ಆಕ್ರೋಶ ಮೂಡಿಸಿದ್ದು, ಹೆತ್ತ ತಾಯಿಯ ಇಂತಹ ಕೃತ್ಯಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಪ್ರಕರಣವು ಸುರೇಬಾನ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Tags:

error: Content is protected !!