Uncategorized

ಕಲಬುರಗಿಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಬರ ಪರಿಸ್ಥಿತಿ ಪರಿಶೀಲನೆ: ಶೀಘ್ರದಲ್ಲೇ ಬೆಳಗಾವಿ ಜಿಲ್ಲೆಗೂ ಭೇಟಿ, “ಪ್ರಜಾ ಇಲಾಖೆ” ಸ್ಥಾಪನೆ ಭರವಸೆ!

Share

ರಾಜ್ಯದ ವಿವಿಧೆಡೆ ಎದುರಾಗಿರುವ ಬರಗಾಲದ ಪರಿಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಲು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಅಖಾಡಕ್ಕಿಳಿದಿದ್ದಾರೆ., ಇನ್ನು ಎರಡರಿಂದ ಮೂರು ದಿನಗಳಲ್ಲಿ ಬೆಳಗಾವಿ ಜಿಲ್ಲೆಗೂ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಯನ್ನು ಅವಲೋಕಿಸುವುದಾಗಿ ಸಿಎಂ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ ಮಾಡಿದ್ದಾರೆ.

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಕಲಬುರಗಿ ಸರ್ಕಾರಿ ಅತಿಥಿ ಗೃಹದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕಲ್ಯಾಣ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಎದುರಾಗಿರುವ ಬರಗಾಲದ ಪರಿಸ್ಥಿತಿಯನ್ನು ಖುದ್ದಾಗಿ ವೀಕ್ಷಿಸಲು ಮತ್ತು ಪರಿಶೀಲಿಸಲು ಬಂದಿರುವುದಾಗಿ ತಿಳಿಸಿದರು. ಇಲ್ಲಿನ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳನ್ನು ಭೇಟಿ ಮಾಡಿ, ಅವರ ಸಮಸ್ಯೆಗಳನ್ನು ಆಲಿಸಲು ಮತ್ತು ಸಭೆ ನಡೆಸಲು ಬಂದಿದ್ದೇನೆ ಎಂದ ಸಿಎಂ, ಇನ್ನು ಎರಡರಿಂದ ಮೂರು ದಿನಗಳಲ್ಲಿ ಬೆಳಗಾವಿ ಜಿಲ್ಲೆಗೂ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸುವುದಾಗಿ ಸ್ಪಷ್ಟಪಡಿಸಿದರು.

ಇದೇ ವೇಳೆ ಸಾರ್ವಜನಿಕರ ಸಮಸ್ಯೆಗಳು ಹಾಗೂ ಬೇಡಿಕೆಗಳ ಅರ್ಜಿಗಳನ್ನು ಸ್ವೀಕರಿಸಿದ ಸಿಎಂ, ಈ ಅರ್ಜಿಗಳನ್ನು ಪರಿಶೀಲಿಸಲು ಸರ್ಕಾರವು ಹೊಸದಾಗಿ “ಪ್ರಜಾ ಇಲಾಖೆ” ಯನ್ನು ಸ್ಥಾಪಿಸಿ, ಅದಕ್ಕೊಬ್ಬರು ಪ್ರತ್ಯೇಕ ಸಚಿವರನ್ನು ನೇಮಕ ಮಾಡಲಿದೆ ಎಂದು ಭರವಸೆ ನೀಡಿದರು. ಆ ಮೂಲಕ ಜನರಿಗೆ ನ್ಯಾಯ ಒದಗಿಸುವ ಕೆಲಸವನ್ನು ಸರ್ಕಾರ ಮಾಡುತ್ತದೆ ಎಂದ ಅವರು, ರೈತರ ಸಾಲ ಮನ್ನಾ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿ, ಯಾವ ಸಾಲ, ಎಲ್ಲಿನ ಸಾಲ ಎನ್ನುವುದರ ಕುರಿತು ಸಂಪೂರ್ಣವಾಗಿ ಪರಿಶೀಲನೆ ನಡೆಸಿ ನಂತರ ಈ ಬಗ್ಗೆ ಮಾತನಾಡುತ್ತೇನೆ ಎಂದು ತಿಳಿಸಿದರು.

Tags:

error: Content is protected !!